ರಾಯಚೂರು: ಜಿಲ್ಲೆಯ ಯರಮರಸ್ ನಲ್ಲಿರುವ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ವೈಟಿಪಿಎಸ್(ಕೆಪಿಸಿಎಲ್) ಸ್ಥಾಪನೆಗಾಗಿ ಭೂಮಿ ಕಳೆದುಕೊಂಡ ರೈತರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಶಾಖೋತ್ಪನ್ನ ಘಟಕ ಸ್ಥಾಪನೆಯ ವೇಳೆಯಲ್ಲಿ ಸರ್ಕಾರವು, ಭೂಮಿ ಕಳೆದುಕೊಂಡಿದ್ದ ರೈತರಿಗೆ ಪರಿಹಾರವನ್ನು ನೀಡಿ, ಉದ್ಯೋಗ ನೇಮಕಾತಿ ಮಾಡಿಕೊಳ್ಳವ ಭರವಸೆಗಳನ್ನು ನೀಡಿತ್ತು. ಆದರೆ ಸರ್ಕಾರ ಇದೂವರೆಗೂ ಯಾವುದೇ ಭರವಸೆಯನ್ನು ಈಡೇರಿಸಿಲ್ಲ ಎಂದು ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಒಂದು ವೇಳೆ ಸರ್ಕಾರ ಇದಕ್ಕೆ ಸ್ಪಂಧಿಸದಿದ್ದರೆ ಅನಿರ್ಧಿಷ್ಟಾವಧಿ ಧರಣಿ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Advertisement
ಜಿಲ್ಲೆಯ ಚಿಕ್ಕಸುಗೂರು, ವಡ್ಲೂರು,ಕುಕನೂರು, ಯರಮರಸ್ ಗ್ರಾಮದ ರೈತರು ಕೆಪಿಸಿಎಲ್ ಗಾಗಿ ಸಾವಿರಾರು ಎಕರೆ ಜಮೀನು ಸರ್ಕಾರಕ್ಕೆ ನೀಡಿದ್ದರು. ಕೆಪಿಸಿಎಲ್ ಸ್ಥಾಪನೆ ವೇಳೆ ನೀಡಲಾಗಿರುವ ಭರವಸೆಗಳನ್ನು ಈಡೇರಿಸುವಂತೆ ನಿರಂತರವಾಗಿ ಹೋರಾಟ ನಡೆಸಿದ್ದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕರರು ಆರೋಪಿಸಿದ್ದು, ಹೀಗಾಗಿ ವೈಟಿಪಿಎಸ್ ಮುಖ್ಯದ್ವಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
Advertisement
ಕೆಪಿಸಿಎಲ್‍ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಕೆಲಸಕ್ಕೆ ತೆರಳದೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಹಿನ್ನೆಲೆ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
Advertisement
ಇದನ್ನೂ ಓದಿ: ರಾಜ್ಯಕ್ಕೆ ಇಂದಿನಿಂದ ಹೊಸಬೆಳಕು: ರಾಯಚೂರಿನ ವೈಟಿಪಿಎಸ್ ಕಾರ್ಯಾರಂಭ
Advertisement