ಚಿಕಿತ್ಸೆ ನೆಪದಲ್ಲಿ ರೋಗಿಗೆ ಲೈಂಗಿಕ ಕಿರುಕುಳ – ಸರ್ಕಾರಿ ವೈದ್ಯನ ಅಮಾನತು

By
1 Min Read

ಚೆನ್ನೈ: ಚಿಕಿತ್ಸೆ ಹೆಸರಿನಲ್ಲಿ ವೈದ್ಯನೊಬ್ಬ ರೋಗಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಮಿಳುನಾಡಿನ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ನಡೆದಿದೆ.

24 ವರ್ಷದ ರೋಗಿಯೊಬ್ಬರು ವೈದ್ಯ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದಾರೆ. ಈ ಪ್ರಕರಣ ಕುರಿತಂತೆ ತನಿಖೆ ನಡೆಸಲು ಆಸ್ಪತ್ರೆಯು ಆಂತರಿಕ ಸಮಿತಿಯನ್ನು ರಚಿಸಿತು. ಸಮಿತಿಯ ಪ್ರಾಥಮಿಕ ಫಲಿತಾಂಶದ ಆಧಾರದ ಮೇಲೆ ಇದೀಗ ಆರೋಪಿ ವೈದ್ಯರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಮತ್ತು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಅಫ್ಘಾನ್ ಹುಡುಗಿಯರ ಪರ ನಿಂತ ಮಲಾಲಾ ಯೂಸುಫ್ ಝಾಯಿ

ಕಿಡ್ನಿ ಕಸಿ ಮಾಡಿಸಿಕೊಂಡಿರುವ ರೋಗಿ ಸ್ಕ್ಯಾನಿಂಗ್‍ಗಾಗಿ ಆಸ್ಪತ್ರೆಗೆ ಹೋಗಿದ್ದ ವೇಳೆ ವೈದ್ಯ ತನಗೆ ರೇಡಿಯಾಲಜಿಸ್ಟ್ ಪರೀಕ್ಷೆಯ ಹೆಸರಿನಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ನವೆಂಬರ್ 27ರಂದು ಆಸ್ಪತ್ರೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಪ್ರಕರಣ ಪತ್ತೆ – ಇಬ್ಬರಿಗೆ ಸೋಂಕು

ಆಕೆಯ ದೂರಿನ ಆಧಾರದ ಮೇಲೆ ಆರೋಪಿ ಡಾ. ಚಕ್ರವರ್ತಿ ವಿರುದ್ಧ ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ ಎಂದು ಆಸ್ಪತ್ರೆಯ ಡೀನ್ ಹೇಳಿದ್ದಾರೆ. ಆಸ್ಪತ್ರೆಯ ಸಮಿತಿಯು ಶುಕ್ರವಾರ ಸಂಜೆ ಪ್ರಾಥಮಿಕ ವರದಿ ಸಲ್ಲಿಸಿದ್ದು, ಬಳಿಕ ವೈದ್ಯರನ್ನು ಅಮಾನತುಗೊಳಿಸಲಾಗಿದೆ.

Share This Article
Exit mobile version