ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D Revanna) ವಿರುದ್ಧ ದಾಖಲಾಗಿರುವ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ವಿರುದ್ಧ ಎಸ್‍ಐಟಿ (SIT) ಎಚ್ಚರಿಕೆಯ ಹೆಜ್ಜೆ ಇಡುವಂತೆ ಸರ್ಕಾರ ಸೂಚಿಸಿದೆ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ.
ಈಗಾಗಲೇ ಎಸ್‍ಐಟಿ ಮೂರು ಬಾರಿ ನೋಟಿಸ್ ನೀಡಿದರೂ ಭವಾನಿ ರೇವಣ್ಣ ಆರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದಾರೆ. ರೇವಣ್ಣ ಬಂಧನ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆ ಈ ವಿಚಾರದಲ್ಲೂ ಅದೇ ರೀತಿ ನಡೆದರೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬುದು ಸರ್ಕಾರದ ಲೆಕ್ಕಾಚಾರ. ಇದೇ ಕಾರಣಕ್ಕೆ ಭವಾನಿ ರೇವಣ್ಣ ವಿಚಾರದಲ್ಲಿ ಎಸ್‍ಐಟಿ ಅಧಿಕಾರಿಗಳಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟ – ವಿಮಾನ ನಿಲ್ದಾಣದಿಂದ ಬರಿಗೈಯಲ್ಲಿ ಪೊಲೀಸರು ವಾಪಸ್
- Advertisement
ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರವಾಗಿ, ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಕೇಳಿಬಂದಿತ್ತು. ಇದಾದ ಬೆನ್ನಲ್ಲೇ ಸಂತ್ರಸ್ತೆಯ ಮಗ ನೀಡಿದ ದೂರಿನ ಅಡಿ ಅವರನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಅವರ ಬೆಂಬಲಿಗರು ಬಂಧನ ವಿರೋಧಿಸಿ ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದ್ದರು. ಇದಾದ ಒಂದು ವಾರದ ಬಳಿಕ ರೇವಣ್ಣ ಜಾಮೀನಿನ ಮೇಲೆ ಹೊಬಂದಿದ್ದರು.
- Advertisement
ಜೈಲಿಂದ ಹೊರ ಬಂದ ಮೇಲೆ ರೇವಣ್ಣ ಈ ಬಗ್ಗೆ ಪ್ರತಿಕ್ರಿಯಿಸಿ, 40 ವರ್ಷ ರಾಜಕೀಯದಲ್ಲಿ ಮೊದಲ ಬಾರಿ ಕೇಸ್ ದಾಖಲಾಗಿದೆ. ಉದ್ದೇಶ ಪೂರ್ವಕವಾಗಿ ನನ್ನ ಮೇಲೆ ಕೇಸ್ ದಾಖಲಿಸಿದ್ದಾರೆ. ನ್ಯಾಯಾಂಗದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದರು. ಇದನ್ನೂ ಓದಿ: ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ತಲೆದಂಡ – ಪೊಲೀಸ್ ಇನ್ಸ್‌ಪೆಕ್ಟರ್, ಮುಖ್ಯ ಪೇದೆ ಅಮಾನತು!