ಬೆಂಗಳೂರು: ಯಾದಗಿರಿ (Yadgiri) ಮೃತ ಪಿಎಸ್‌ಐ ಪರಶುರಾಮ್ (PSI Parashuram) ಪತ್ನಿಗೆ ಸರ್ಕಾರದಿಂದ ಉದ್ಯೋಗ ನೀಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಘೋಷಣೆ ಮಾಡಿದ್ದಾರೆ.
ಯಾದಗಿರಿ ಪಿಎಸ್‌ಐ ಸಾವು ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,ಪಿಎಸ್‌ಐ ಸಾವು ಪ್ರಕರಣ ಸಿಐಡಿಗೆ ನೀಡಲಾಗಿದೆ. ಅದರ ತನಿಖೆ ಮಾಡುತ್ತಿದ್ದಾರೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡುತ್ತಿದ್ದೇವೆ. ಅದು ಬಂದ ಮೇಲೆ ಯಾಕೆ ಸಾವಾಗಿದೆ ಎಂದು ಗೊತ್ತಾಗುತ್ತದೆ. ನಾನು ನಾಡಿದ್ದು ಅವರ ಮನೆಗೆ ಹೋಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರ ಶ್ರೀಮತಿಗೆ ಕೆಲಸ ಕೊಡಬೇಕು ಎಂದು ನಾವು ತೀರ್ಮಾನ ಮಾಡಿದ್ದೇವೆ. ಅವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವ ಕೆಲಸ ಮಾಡುತ್ತೇವೆ. ಉದ್ಯೋಗ ಕೊಡಲು ಸಿಎಂ ಮತ್ತು ನಾನು ಚರ್ಚೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ಕಾನೂನು ಹೋರಾಟ: ಪರಮೇಶ್ವರ್
ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಮತ್ತು ಶಾಸಕನ ಪುತ್ರನ ಮೇಲೆ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಿಐಡಿ ತನಿಖೆಗೆ ಕೊಡಲಾಗಿದೆ. ತನಿಖೆಯ ವರದಿ ಬರಲಿ. ತನಿಖೆಯಲ್ಲಿ ಶಾಸಕರು ಮತ್ತು ಅವರ ಪುತ್ರನ ಪಾತ್ರವಿದ್ದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬ್ರಿಟನ್‌ನಲ್ಲಿ ಸ್ಥಳೀಯರು Vs ವಲಸಿಗ ಮುಸ್ಲಿಮರ ಮಧ್ಯೆ ಸಂಘರ್ಷ – 148 ಮಂದಿ ಬಂಧನ