Bengaluru City
ಬ್ರಾಹ್ಮಣರ ಉದ್ಧಾರಕ್ಕೆ ಸರ್ಕಾರದಿಂದ ಅನುದಾನ – ಶೀಘ್ರವೇ ಬರಲಿದ್ಯಂತೆ ಅಭಿವೃದ್ಧಿ ನಿಗಮ

ಬೆಂಗಳೂರು: ವಿಧಾನಸಭಾ ಚುನಾವಣೆಯ ಹೊತ್ತಲ್ಲಿ ಕಾಂಗ್ರೆಸ್ ಸರ್ಕಾರ ಮೇಲ್ಜಾತಿ ದಾಳ ಉರುಳಿಸಲು ಮುಂದಾಗಿದೆ. ಅಹಿಂದ ಸರ್ಕಾರವೆಂಬ ಹಣೆಪಟ್ಟಿ ಕಳಚಿ ಮೇಲ್ವರ್ಗದವರ ಮತಗಳನ್ನು ಸೆಳೆಯುವ ಸಲುವಾಗಿ ಹೊಸ ತಂತ್ರಕ್ಕೆ ಕೈ ಹಾಕಿದೆ. ಅದೇ ಬ್ರಾಹ್ಮಣ ಅಭಿವೃದ್ಧಿ ನಿಗಮದ ಸ್ಥಾಪನೆ.
ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಹೆಣ್ಣು ಮಕ್ಕಳ ಮದುವೆಗೆ ಸಹಾಯಧನ, ಶಿಕ್ಷಣಕ್ಕೆ ಪ್ರೋತ್ಸಾಹಧನ ನೀಡಿ ಹಿಂದುಳಿದ ಬ್ರಾಹ್ಮಣರ ಅಭಿವೃದ್ಧಿಗೆ ನೆರವಾಗುವುದು ನಿಗಮದ ಉದ್ದೇಶ. ಈ ನಿಟ್ಟಿನಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ನಿಗಮ ಸ್ಥಾಪನೆ ಸಂಬಂಧ ಶೀಘ್ರವೇ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಹೇಳಿದ್ದಾರೆ.
ಇದನ್ನು ವೋಟ್ ಬ್ಯಾಂಕ್ ರಾಜಕೀಯ, ಚುನಾವಣಾ ಗಿಮಿಕ್ ಅಂತ ಬಿಜೆಪಿ ಹೇಳಿದೆ. ಎಲ್ಲಾ ಜಾತಿಯವರನ್ನು ಎಸ್‍ಸಿ, ಎಸ್‍ಟಿ ಮಾಡಿ, ಇಲ್ಲ ಹಿಂದುಳಿದ ವರ್ಗಕ್ಕೆ ಸೇರಿಸಿ. ಚುನಾವಣೆ ಹತ್ತಿರ ಬರುತ್ತಿರುವ ಕಾರಣ ಸರ್ಕಾರಕ್ಕೆ ಲಿಂಗಾಯತರು, ಬ್ರಾಹ್ಮಣರು ನೆನಪಾಗುತ್ತಾರೆ ಅಂತ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಉತ್ತರ ಕರ್ನಾಟಕದತ್ತ ಕುಮಾರಸ್ವಾಮಿ ಚಿತ್ತ?
