ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ (Hubballi Eidgah Maidan) ಗಣೇಶ ಪ್ರತಿಷ್ಠಾಪನೆಗೆ ಕಳೆದ ಬಾರಿ ಸುಪ್ರೀಂ ಕೋರ್ಟ್ ನಮಗೆ ಅವಕಾಶ ನೀಡಿದೆ. ಈ ಬಾರಿಯೂ ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲು ನಿರ್ಧಾರ ಮಾಡಿದ್ದು, ಕಾಂಗ್ರೆಸ್ (Congress) ಸರ್ಕಾರ ವಿನಾಕಾರಣ ಅಲ್ಪ ಸಂಖ್ಯಾತರ ತುಷ್ಟೀಕರಣಕ್ಕಾಗಿ ಪರ್ಮಿಶನ್ ಕೊಡ್ತಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ (Arvind Bellad) ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡುತ್ತಿಲ್ಲ. ಜಗತ್ತಿಗೆ ಬೇಡವಾದ ಟಿಪ್ಪು ಜಯಂತಿಯನ್ನು ಅಲ್ಲಿ ಮಾಡಿದ್ದಾರೆ. ನಮಾಜ್ ಕೂಡಾ ಮಾಡಿದ್ದಾರೆ. ನಾವು ಪ್ರತಿಷ್ಠಾಪನೆಗೆ ಮನವಿ ಕೇಳಿದರೆ ಅವಕಾಶ ಕೊಡುತ್ತಿಲ್ಲ. ಅನುಮತಿ ಕೋರಿ ನಾವು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇವೆ. ಅನುಮತಿ ಕೊಡಲಿ ಬಿಡಲಿ. ನಾವು ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಅಷ್ಟೇ ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ ಎಂದರು.
Advertisement
Advertisement
ಯಾರೂ ಅನುಮತಿ ಕೊಡಬೇಡಿ ಅಂತಾರೆ ಅವರು ದೇಶ ವಿರೋಧಿ ಸಂಘಟನೆಗಳು. ಒಂದು ತಿಂಗಳ ಹಿಂದೆ ಡಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಸರ್ಕಾರದಿಂದ ಏನೂ ಬಂದಿಲ್ಲ. ಇದು ಪಾಲಿಕೆ ಜಾಗ, ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಬರಲ್ಲ. ಗಣಪತಿ ಪ್ರಿಯರ ಪರವಾಗಿ ನಾನು ಮಾತಾಡ್ತಿದ್ದೇನೆ. ಜನರ ಭಾವನೆ ನಾನು ಸರ್ಕಾರಕ್ಕೆ ಮುಟ್ಟಿಸುತ್ತೇನೆ. ಪಾಲಿಕೆ ಕಮಿಷನರ್ ಸರ್ಕಾರಕ್ಕೆ ಕೇಳೋ ಅವಶ್ಯಕತೆ ಇಲ್ಲ. ಗಣೇಶ ಹಬ್ಬ ಮಾಡಿದರೆ ಅಲ್ಪ ಸಂಖ್ಯಾತರು ಸಿಟ್ಟಾಗುತ್ತಾರೆ ಎಂದು ಕಾಂಗ್ರೆಸ್ ತಿಳಿದುಕೊಂಡಿದೆ. ಹೀಗಾಗಿ ಅನುಮತಿ ತಡ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ರೈಲು ಪ್ರಯಾಣದ ವೇಳೆ 8 ಯುವಕರಿಗೆ ಮತ್ತು ಬರೋ ಚಾಕ್ಲೇಟ್ ನೀಡಿ ದರೋಡೆ
Advertisement
ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟೀಕರಣ ಬೇಕು. ಕಳೆದ ಒಂದು ತಿಂಗಳಿಂದ ಇದು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಅಧಿಕೃತವಾಗಿ ಪಾಲಿಕೆ ಲಿಖಿತವಾಗಿ ಅನುಮತಿ ಕೊಟ್ಟಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಅಧಿಕಾರಿಗಳು ಅವರ ಕೈಗೊಂಬೆ ಆಗಿದ್ದಾರೆ. ದೇಶ ವಿರೋಧಿ ಸಂಘಟನೆಗಳಿಗೆ ಕಾಂಗ್ರೆಸ್ ಸರ್ಕಾರ ಬಂದರೆ ಕಾಂಗ್ರೆಸ್ ಕೊಂಬು ಚಿಗುರು ಬರುತ್ತದೆ ಎಂದರು.
Advertisement
ಎಸ್‌ಡಿಪಿಐ, ಎಐಎಂಐಎಂ ಸಂಘಟನೆಗಳು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಡಿ ಎಂದು ಮನವಿ ಕೊಟ್ಟಿವೆ. ಅವೆರಡು ದೇಶ ವಿರೋಧಿ ಸಂಘಟನೆಗಳು ಎಂದು ಬೆಲ್ಲದ್ ಹೇಳಿದರು. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ
Web Stories