ಬೆಂಗಳೂರು: ಶಾಂತಿಯುತವಾಗಿ, ಜನರಿಗೆ ತೊಂದರೆ ಆಗದಂತೆ ಬಂದ್ ಮಾಡಿದ್ರೆ ಸರ್ಕಾರ ಅದಕ್ಕೆ ಅಡಚಣೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಮಂಗಳವಾರ ಬೆಂಗಳೂರು ಬಂದ್ (Bengaluru Bandh) ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಭಟನೆ ಮಾಡಲು, ರಾಜ್ಯದ ಹಿತ ಕಾಪಾಡಲು ನಾವು ಎಲ್ಲಾ ರೀತಿಯ ಸಹಕಾರ ಕೊಡುತ್ತೇವೆ. ನಮ್ಮ ನೆಲ, ಜಲ, ಭಾಷೆ ಎಲ್ಲರೂ ಉಳಿಸಿಕೊಳ್ಳಬೇಕು. ಯಾವುದೇ ಪಾರ್ಟಿ ಆದರೂ ಉಳಿಸಿಕೊಳ್ಳಬೇಕು. ನಮ್ಮ ಪಕ್ಷದವರು ಏನು ಮಾಡುವುದು ಎಂದು ನನಗೆ ಕರೆ ಮಾಡಿದ್ದರು. ನಿಮ್ಮ ರಕ್ಷಣೆ, ಯಾರು ತಪ್ಪಬೇಡಿ ಎಂದು ಹೇಳಿದ್ದೇನೆ. ನಿಮ್ಮ ಹೋರಾಟಕ್ಕೆ ನಾವು ಅಡಚಣೆ ಮಾಡುವುದಿಲ್ಲ. ಆದರೆ ಎಲ್ಲರೂ ಶಾಂತಿ ಕಾಪಾಡಬೇಕು. ಜನರಿಗೆ ತೊಂದರೆ ಆಗಬಾರದು. ಹೋರಾಟ ಮಾಡಲಿ, ಅದು ಅವರ ಹಕ್ಕು. ಆದರೆ ಶಾಂತಿ ಕಾಪಾಡಬೇಕು. ಯಾವ ಪಕ್ಷದವರಿಗೂ, ಯಾರಿಗೂ ನಾವು ತೊಂದರೆ ಕೊಡಲು ಹೋಗಲ್ಲ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ-ಜೆಡಿಎಸ್ ಶಾಸಕರು ಚರ್ಚೆ ಮಾಡಿದ್ದಾರೆ: ಡಿಕೆಶಿ
Advertisement
Advertisement
ನಾವು ನಮ್ಮ ರಾಜ್ಯದ ಹಕ್ಕು ಉಳಿಸಲು ಕೆಲಸ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪು ಇದೆ. ಅದನ್ನು ಅರಿತುಕೊಳ್ಳಬೇಕು. ಟಿವಿಯವರು ಕರೆಯುತ್ತಾರೆ ಹೆಸರು ಕೊಡುತ್ತಾರೆ ಎಂದು ಮಾತನಾಡಿ ನಾಳೆ ಕೋರ್ಟ್ನಲ್ಲಿ ಸಮಸ್ಯೆ ಆಗೋದು ಬೇಡ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಬಂದ್ ಮಾಡುವವರು ತೀರ್ಮಾನ ಮಾಡಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ
Advertisement
ನಿನ್ನೆ-ಮೊನ್ನೆ ಮಳೆ ಆಗಿ ಒಳ ಹರಿವು ಉತ್ತಮವಾಗಿ ಆಗಿದೆ. ಮೋಡ ಬಿತ್ತನೆ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ. ಏನಾದರೂ ಮಾಡಲು ಸಾಧ್ಯವಿದೆಯಾ ಎಂದು ಚರ್ಚೆ ಮಾಡಿದ್ದೇವೆ. ಎರಡು-ಮೂರು ಅಭಿಪ್ರಾಯ ಅದಕ್ಕೆ ಬಂದಿದೆ. ಈಗ ಇರುವ ಪರಿಸ್ಥಿತಿಯಲ್ಲಿ ಮುಂದೆ ನೀರು ಬಿಡೋದು ಕಷ್ಟ ಆಗುತ್ತದೆ. ನಾನು ಒಬ್ಬ ಮಂತ್ರಿಯಾಗಿ ಏನೂ ಮಾತನಾಡಲು ಆಗುತ್ತಿಲ್ಲ. ನಾನು ಕೋರ್ಟ್ಗೂ ಗೌರವ ಕೊಡಬೇಕು. ಜನರನ್ನೂ ಉಳಿಸಿಕೊಳ್ಳಬೇಕು. ಡೆವಿಲ್ ಅಂಡ್ ದಿ ಡೀಪ್ ಸೀ ಅನ್ನೋ ರೀತಿ ನನ್ನ ಮತ್ತು ನಮ್ಮ ಸರ್ಕಾರದ ಪರಿಸ್ಥಿತಿ ಆಗಿದೆ. ಏನೇ ಆದರೂ ನಮ್ಮ ರಾಜ್ಯದ ಹಿತ ನಾವು ಕಾಪಾಡಬೇಕು. ಇದು ನಮ್ಮ ಡ್ಯೂಟಿ ಎಂದು ತಿಳಿಸಿದರು. ಇದನ್ನೂ ಓದಿ: ಹೈದರಾಬಾದ್ನಲ್ಲಿ ಚುನಾವಣೆಗೆ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್ಗೆ ಓವೈಸಿ ಚಾಲೆಂಜ್
Advertisement
ಒಂದೇ ವಾರ ಎರೆಡೆರಡು ಬಂದ್ ವಿಚಾರವಾಗಿ ಮಾತನಾಡಿದ ಅವರು, ನಾವು ನಿಮ್ಮ ಜೊತೆ ಇದ್ದೇವೆ. ಜನಕ್ಕೆ ತೊಂದರೆ ಆಗಬಾರದು. ಜನರು ಸಹಕಾರ ಕೊಡಲಿಲ್ಲ ಅಂದರೆ ಆ ಬಂದ್ಗೆ ಮರ್ಯಾದೆ ಹೋಗುತ್ತದೆ. ಅವರಲ್ಲೆ ಚರ್ಚೆಗಳು ಆಗುತ್ತದೆ. ಅದರಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ. ಕೋರ್ಟ್ ವಿಚಾರವೂ ಅವರಿಗೆ ಗೊತ್ತಿದೆ. ಅದನ್ನು ಅವರು ನೋಡಲಿ ಎಂದು ಬಂದ್ ಮಾಡುವವರಿಗೆ ಸಲಹೆ ನೀಡಿದರು. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ ಭಾರೀ ಪ್ರಮಾಣದಲ್ಲಿ ಹೆಚ್ಚಳ
Web Stories