– ಭೂಸ್ವಾಧೀನಕ್ಕೆ ಸರ್ಕಾರದ ಅಧಿಸೂಚನೆ
– ಬಿಡದಿ ಮಾದರಿ ಹೋರಾಟಕ್ಕೆ ರೈತರ ಸಜ್ಜು
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಇದೀಗ ಮೈಸೂರು(Mysuru) ಜಿಲ್ಲೆಯಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಗೆ(Agriculture Land) ರಾಜ್ಯ ಸರ್ಕಾರ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ಬರೋಬ್ಬರಿ 165 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಸ್ಥಳೀಯ ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮೈಸೂರು ವಿಮಾನ ನಿಲ್ದಾಣದ (Mysuru Airport) ಸಮೀಪವಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಈ 165 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಈ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಾಣಿಜ್ಯ ಮತ್ತು ಆಹಾರ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿದ್ದಾರೆ. ಸಮೃದ್ಧವಾಗಿ ಬೆಳೆ ತೆಗೆಯುತ್ತಿರುವ ಭೂಮಿಯನ್ನೇ ಕೈಗಾರಿಕೆ ಹೆಸರಿನಲ್ಲಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ಅನ್ನದಾತರ ಆತಂಕವನ್ನು ಹೆಚ್ಚಿಸಿದೆ. ಇದನ್ನೂ ಓದಿ: ನೇಪಾಳ ಜಲಪ್ರಳಯಕ್ಕೆ ನಗರಗಳೇ ಸರ್ವನಾಶ: 300 ಭಾರತೀಯರು ಸೇರಿ ನೂರಾರು ಜನ ನಾಪತ್ತೆ
ಬೆಂಗಳೂರು ಸಮೀಪದ ಬಿಡದಿಯಲ್ಲಿ ನಡೆದ ಭೂಸ್ವಾಧೀನ ವಿರೋಧಿ ಚಳವಳಿಯ ಮಾದರಿಯಲ್ಲೇ ಮೈಸೂರಿನಲ್ಲೂ ಬೃಹತ್ ಹೋರಾಟ ರೂಪಿಸಲು ರೈತ ಸಂಘಟನೆಗಳು ಮತ್ತು ಭೂಮಾಲೀಕರು ಸಜ್ಜಾಗುತ್ತಿದ್ದಾರೆ.
