ನವದೆಹಲಿ: 7 ರಿಂದ 11 ವರ್ಷದ ಮಕ್ಕಳಿಗೆ ಸೆರಮ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವೊವ್ಯಾಕ್ಸ್ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಕೇಂದ್ರಿಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಎಸ್‍ಇಸಿ) ತಜ್ಞರ ತಂಡ ಶಿಫಾರಸು ಮಾಡಿದೆ.
Advertisement
7 ರಿಂದ 11 ವರ್ಷದ ಮಕ್ಕಳಿಗೆ ಕೋವೊವ್ಯಾಕ್ಸ್ ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಎರಡು ಅರ್ಜಿಗಳನ್ನು ಸೀರಮ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‍ಎಸ್‍ಐ) ಸಲ್ಲಿಸಿತ್ತು. ಈ ಅರ್ಜಿ ಸಲ್ಲಿಕೆಯ ಬಳಿಕ ತಜ್ಞರ ಸಮಿತಿ ಮತ್ತಷ್ಟು ಮಾಹಿತಿ ನೀಡುವಂತೆ ಸೀರಮ್ ಕಂಪನಿಗೆ ಸೂಚಿಸಿತ್ತು. ಇದನ್ನೂ ಓದಿ: ವೃದ್ಧೆಯ ಹೊಟ್ಟೆ ಕೊಯ್ದು ಹಾಗೆ ಬಿಟ್ಟ – ವೈದ್ಯನ ಯಡವಟ್ಟಿಗೆ ವೃದ್ಧೆ ನರಳಾಟ
Advertisement
Advertisement
ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಈ ಹಿಂದೆ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ತುರ್ತು ಬಳಕೆಗೆ ಅನುಮೋದನೆ ನೀಡಿತ್ತು. ಆ ಬಳಿಕ 2022ರ ಮಾರ್ಚ್ 16 ರಿಂದ ಕೋವೊವ್ಯಾಕ್ಸ್ ತುರ್ತು ಬಳಕೆ ಆರಂಭಿಸಲಾಗಿತ್ತು. ಇದನ್ನೂ ಓದಿ: ಫಿಫಾ ವಿಶ್ವಕಪ್ ವೇಳೆ ಸೆಕ್ಸ್ ಮಾಡಿದ್ರೆ 7 ವರ್ಷ ಜೈಲು!
Advertisement
ಇದೀಗ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. 2 ಡೋಸ್ ಲಸಿಕೆ ಪಡೆದುಕೊಂಡವರು ಇದೀಗ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ. 18 ವರ್ಷ ಮೇಲ್ಪಟ್ಟವರು ಖಾಸಗಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಎಪ್ರಿಲ್ 10 ರಿಂದ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.