ನವದೆಹಲಿ: ಪಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವೇಳೆ ಮತ್ತು ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.
ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವ ಹಣಕಾಸು ಮಸೂದೆಯಲ್ಲಿ ತಿದ್ದುಪಡಿ ತಂದು ಆಧಾರ್ ಕಡ್ಡಾಯ ಅಂಶವನ್ನು ಕೇಂದ್ರ ಸರ್ಕಾರ ಸೇರಿಸಿದೆ. ಜುಲೈ 1ರಿಂದ ಈ ನಿಯಮ ಜಾರಿಗೆ ಬರಲಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿ ಹಣಕಾಸು ಮಸೂದೆಯ ಬಗ್ಗೆ ಬುಧವಾರ ಸಂಸತ್ತಿನಲ್ಲಿ ಮಾತನಾಡಲಿದ್ದಾರೆ.
Advertisement
ಕಳೆದ ಕೆಲ ವರ್ಷಗಳ ಐಟಿಆರ್ ಸಲ್ಲಿಕೆಯ ಆಧಾರ್ ಐಚ್ಚಿಕವಾಗಿತ್ತು. ಭಾರತದಲ್ಲಿ ವಿದೇಶಿ ಪ್ರಜೆಗಳು ತೆರಿಗೆ ಪಾವತಿಸುತ್ತಿರುವುದರಿಂದ ಈಗ ಕೆಲ ಪ್ರಶ್ನೆಗಳು ಎದ್ದಿದ್ದು ಈ ಸಮಸ್ಯೆಗೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕಿದೆ.
Advertisement
ಕೇಂದ್ರ ಸರ್ಕಾರ ಈಗ ಎಲ್ಲ ಸೇವೆಗಳಿಗೂ ಆಧಾರ್ ಕಡ್ಡಾಯಗೊಳಿಸುತ್ತಿದ್ದು, ಕೆಲ ದಿನಗಳ ಹಿಂದೆ ಬಡ ಮಹಿಳೆಯರು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಅಡಿಗೆ ಅನಿಲ(ಎಲ್ ಪಿಜಿ) ಸಂಪರ್ಕ ಪಡೆಯಯಲು ಆಧಾರ ಕಾರ್ಡ್ ಅನ್ನು ಕಡ್ಡಾಯಗೊಳಿಸಿತ್ತು.