ಮಂಡ್ಯ: ಹಾಡ ಹಗಲೇ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರೊಬ್ಬರನ್ನ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ, ಅರೆಚಾಕನಹಳ್ಳಿ ಬಳಿ ನಡೆದಿದೆ.
Advertisement
ಬಿದರಹೊಸಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಶಶಿಭೂಷಣ್ ಕೊಲೆಯಾದ ದುರ್ದೈವಿ. ಎಂದಿನಂತೆ ಮಂಡ್ಯದಿಂದ ಶಶಿಭೂಷಣ್ ಕೆಲಸದ ನಿಮಿತ್ತ ಬೈಕ್‍ನಲ್ಲಿ ಹೊರಟಿದ್ದರು. ಈ ಸಂದರ್ಭ ಶಶಿಭೂಷಣ್ ಅವರನ್ನ ಕಾರ್‍ನಲ್ಲಿ ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳು, ಬೈಕ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಆಯ ತಪ್ಪಿ ಶಶಿಭೂಷಣ್ ಕೆಳಗೆ ಬಿದ್ದಿದ್ದಾರೆ. ತಕ್ಷಣ ಕಾರಿನಿಂದ ಕೆಳಗಿಳಿದ ದುಷ್ಕರ್ಮಿಗಳು, ಶಶಿಭೂಷಣ್ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
Advertisement
Advertisement
ಹಾಡ ಹಗಲೆ ನಡು ರಸ್ತೆಯಲ್ಲಿ ನಡೆದ ಸರ್ಕಾರಿ ಶಾಲೆಯ ಮುಖ್ಯೋಪಧ್ಯಾಯನ ಕೊಲೆ ನೋಡಿ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ವಿಷಯ ತಿಳಿದ ತಕ್ಷಣ ಕೆಎಂ ದೊಡ್ಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Advertisement