ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನರಸಿಂಹ ಮೂರ್ತಿ (59) ಆತ್ಮಹತ್ಯೆ ಮಾಡಿಕೊಂಡ ಮುಖ್ಯ ಶಿಕ್ಷಕ. ಹೊಸಕೋಟೆ ಜಡಗನಹಳ್ಳಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಜನವರಿ 15 ಕ್ಕೆ ಸೇವೆಯಿಂದ ನಿವೃತ್ತಿ ಹೊಂದಬೇಕಿತ್ತು.
Advertisement
10 ಕೋಟಿ ಜಾಗದ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಂಗನಗರದಲ್ಲಿ 25 ಗುಂಟೆ ಜಮೀನು ಹೊಂದಿದ್ದರು.
Advertisement
ಕಾಂಗ್ರೆಸ್ ಮುಖಂಡ ಸತೀಶ್ ಎಂಬವರು ಜಮೀನು ಖರೀದಿಸೋದಾಗಿ ಅಗ್ರಿಮೆಂಟ್ ಹಾಕಿಸಿಕೊಂಡಿದ್ದರು. 10 ಕೋಟಿ ಜಮೀನಿಗೆ 10 ಲಕ್ಷ ಕೊಟ್ಟು ಅಗ್ರಿಮೆಂಟ್ ಆಗಿತ್ತು. ಉಳಿದ ಹಣ ಕೊಡದೆ ಜಮೀನು ಲಪಟಾಯಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.
Advertisement
ಹಣ ಕೇಳಲು ಹೋದಾಗ ಧಮ್ಕಿ ಹಾಕಿದ್ದರು. ಇದರಿಂದ ಮನನೊಂದು ನರಸಿಂಹ ಮೂರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.