ಬೆಂಗಳೂರು: ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು (Flash Message To Mobile) ಬಂದಿದೆ.
ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್‍ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಕುರಿತು ಕಳೆದೆರಡು ದಿಗಳಿಂದ ಸಂದೇಶಗಳು ಬರುತ್ತಿದ್ದವು. ಅಂತೆಯೇ ಇಂದು (ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಂಗ್ಲಿಷ್ ಮತ್ತು ಕನ್ನಡದಲ್ಲಿ 2 ಬಾರಿ ಫ್ಲ್ಯಾಶ್ ಮೆಸೇಜ್ ಜೊತೆ ವಿಭಿನ್ನ ಶಬ್ದ ಕೂಡ ಮೊಬೈಲ್‍ಗೆ ಬಂದಿದೆ.
Advertisement
Advertisement
ಸಂದೇಶದಲ್ಲಿ ಏನಿತ್ತು..?: ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ (Alert Test Message) ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಗಾಝಾ ನಗರಕ್ಕೆ ಇಸ್ರೇಲ್ ದಿಗ್ಬಂಧನ – ಅನ್ನ, ನೀರಿಗೂ ಪ್ಯಾಲೆಸ್ತೀನಿಯರ ಪರದಾಟ
Advertisement
Advertisement
ಭಯಪಡಬೇಡಿ: ಈ ಮೊದಲು ಕಳುಹಿಸಲಾಗಿದ್ದ ಸಂದೇಶದಲ್ಲಿ ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ಧದೊಂದಿಗೆ ಸಂದೇಶ ಫ್ಲ್ಯಾಶ್ ಆಗಲಿದೆ. ಬಳಕೆದಾರರು ಓಕೆ ಕೊಡುವವರೆಗೂ ಈ ಶಬ್ಧ ಬರುತ್ತಲೇ ಇರುತ್ತದೆ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆದರೆ ಇದಕ್ಕೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಲಾಗಿತ್ತು.
Web Stories