ನವದೆಹಲಿ: ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನಗಳನ್ನು ಬಳಸಿ ಚಾಲನೆಯಾಗುವ ವಾಹನಗಳು ಯಾವುದೇ ಪರ್ಮಿಟ್ ಇಲ್ಲದೇ ರಸ್ತೆಗಿಳಿಯಬಹುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ(ಎಸ್‍ಐಎಎಂ) ವಾರ್ಷಿಕ ಅಧಿವೇಶನದಲ್ಲಿ ಮಾತನಾಡಿದ ಅವರು ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನ ಬಳಸಿ ಚಲಿಸುವ ವಾಹನಗಳಿಗೆ ಪ್ರೋತ್ಸಾಹ ನೀಡಲು ಎಲೆಕ್ಟ್ರಿಕಲ್ ವಾಹನ ಸೇರಿದಂತೆ, ಎಥೆನಾಲ್, ಬಯೋ ಡೀಸೆಲ್, ಸಿಎನ್‍ಜಿ ಹಾಗೂ ಬಯೋ ಇಂಧನಗಳ ಮೂಲಕ ಸಾಗುವ ವಾಹನಗಳಿಗೆ ರಸ್ತೆ ರಹದಾರಿಯನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದೇವೆ. ಇಂತಹ ವಾಹನಗಳಿಗೆ ಉಚಿತ ಪರ್ಮಿಟ್ ನೀಡುವ ಮೂಲಕ, ಸುಲಭವಾಗಿ ರಸ್ತೆಗಿಳಿಯುವಂತೆ ಮಾಡಲಾಗಿದೆ ಎಂದರು.
Advertisement
Advertisement
ಆ್ಯಪ್ ಆಧಾರಿತಾ ಟ್ಯಾಕ್ಸಿ ಸೇವೆಗಳಾದ ಊಬರ್ ಹಾಗೂ ಓಲಾಗಳು ತಮ್ಮ ವಾಹನಗಳನ್ನು ಎಲೆಕ್ಟ್ರಿಕ್ ಮಾದರಿಗಳನ್ನು ಬಳಸುವ ಮೂಲಕ ರಸ್ತೆ ತೆರಿಗೆಗಳ ವಿನಾಯಿತಿ ಹೊಂದಬಹುದಾಗಿದೆ ಎಂದು ಈ ವೇಳೆ ಸಲಹೆ ನೀಡಿದರು. ಇದನ್ನೂ ಓದಿ: 2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ
Advertisement
ವಾಹನ ತಯಾರಿಕಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಮುಂದೆ ಬರುವುದಕ್ಕಾಗಿ ಈ ನಿರ್ಧಾರನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಎಲೆಕ್ಟ್ರಿಕ್ ವಾಹನಗಳಿಗೆ ಮೇಲೆ 12% ಜಿಎಸ್‍ಟಿ ಇದೆ. ಹೀಗಾಗಿ ಮತ್ತೆ ಯಾವುದೇ ಸಬ್ಸಿಡಿ ಅವಶ್ಯಕತೆ ಇರುವುದಿಲ್ಲ ಎಂದು ಯೋಚಿಸಿದ್ದೇನೆ. ಉತ್ತಮ ವಾತಾವರಣವನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ನಮ್ಮ ಇಲಾಖೆಯು ಈ ಬಗ್ಗೆ ವರದಿ ಸಿದ್ದಪಡಿಸಿದ್ದು, ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಓಡಾಟ ಜಾಸ್ತಿಯಾಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!
Advertisement
ಕೇಂದ್ರ ಸರ್ಕಾರವು 2015ರಲ್ಲಿ ಜಾರಿಗೆ ತಂದ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಯೋಜನೆಗೆ ಈ ನಿರ್ಧಾರವು ಸಹಾಯಕವಾಗುತ್ತದೆ. ವಾಹನಗಳ ಮೇಲಿನ ಪರ್ಮಿಟ್ ತೆಗೆದು ಹಾಕಿರುವುದರಿಂದ ವಾಹನ ತಯಾರಿಕಾ ಸಂಸ್ಥೆಗಳ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಒತ್ತು ನೀಡಬೇಕು ಎಂದು ಕೇಳಿಕೊಂಡಿದ್ದಾರೆ.
मैन आज घोषणा की है की ग्रीन फ्यूल इथेनॉल,मिथेनॉल, बायो सीएनजी और इलेक्ट्रिक से चलने वाली गाड़ियों को परमिट की जरूरत नहीं होगी। मुझे उम्मीद है कि इस निर्णय से परिवहन क्षेत्र में व्यापक परिवर्तन आएगा। pic.twitter.com/4Yv4MN2n7f
— Nitin Gadkari (@nitin_gadkari) September 6, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv