ರಾಮನಗರ: ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು (Shakti Scheme) ಸ್ಥಗಿತ ಇಲ್ಲವೇ ಮರು ಪರಿಶೀಲನೆ ಮಾಡುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಒಂದೊಂದಾಗಿ 5 ಗ್ಯಾರಂಟಿಗಳನ್ನು (Guarantee Scheme) ನಿಲ್ಲಿಸಲು ಇದೊಂದು ಮೊದಲ ಹೆಜ್ಜೆ ಅಷ್ಟೇ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್ ಕುತಂತ್ರದಿಂದ ನಾನು ಎರಡು ಬಾರಿ ಸೋತಿದ್ದೇನೆ: ಭಾಷಣದ ವೇಳೆ ನಿಖಿಲ್ ಕಣ್ಣೀರು
ಮಹಿಳೆಯರು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಅಥವಾ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ ಎಂದು ಇವರಿಗೆ ಹೊಸ ಜ್ಞಾನೋದಯ ಆಗಿದೆಯಾ? ಕೇವಲ ಒಂದೂವರೆ ವರ್ಷದಲ್ಲಿ ಇವರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಶಕ್ತಿ ಯೋಜನೆಯ ಮರು ಪರಿಶೀಲನೆಯ ನಾಟಕ ಗ್ಯಾರಂಟಿಗಳನ್ನು ಒಂದೊಂದಾಗಿಯೇ ತೆಗೆಯಲು ಮೊದಲ ಹಂತದ ಪ್ರಕ್ರಿಯೆ ಎಂದೇ ಭಾವಿಸಬೇಕಾಗುತ್ತದೆ. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಮಾತ್ರ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿಗಳನ್ನೇ ಪ್ರಮುಖವಾಗಿ ಇವರು ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್‌ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸೇನಾ ವಾಪಸಾತಿ ಬಳಿಕ ಗಡಿಯಲ್ಲಿ ದೀಪಾವಳಿ ಸಿಹಿ ಹಂಚಿಕೊಂಡ ಭಾರತ-ಚೀನಾ ಸೈನಿಕರು
ತೆರಿಗೆ ಅಧಿಕಾರಿಗಳ ಸಭೆ ಮಾಡಿ ಇನ್ನೂ ಹೆಚ್ಚುವರಿಯಾಗಿ 10,000 ಕೋಟಿ ರೂ. ವಸೂಲಿ ಮಾಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಅಂದರೆ ಇನ್ನಷ್ಟು ಸುಲಿಗೆ ಮಾಡಿ ಅಂತ ಅರ್ಥ ಅಲ್ಲವೇ? ಇದು ಯಾವ ಪುರುಷಾರ್ಥಕ್ಕೆ ಎಂದು ಹರಿಹಾಯ್ದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆ ಕೊಡಲು ಆಗದ ಕಾಂಗ್ರೆಸ್ ಸರ್ಕಾರ ಯೂಟರ್ನ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ