ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ಮಾಡುವುದು ಕಡ್ಡಾಯ ಎಂದು ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.
ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೆನಡಾ ರಕ್ಷಣಾ ಸಚಿವರಾಗಿ ಭಾರತ ಮೂಲದ ಅನಿತಾ ಆನಂದ್ ಆಯ್ಕೆ
ಆ ದಿನ ಗೋವುಗಳನ್ನು ದೇವಾಲಯಕ್ಕೆ ಕರೆತಂದು ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಬೇಕು. ನಂತರ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸುಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಬೇಕು ಎಂದು ತಿಳಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ.
ಅನಾದಿಕಾಲದಿಂದಲೂ ನಮ್ಮ ಪೂರ್ವಿಕರು ಗೋವಿನ ಪೂಜೆ ಮಾಡುತ್ತಿದ್ದರು. ಇದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ಕರ್ನಾಟಕದಲ್ಲೂ ಹಿಂದಿನಿಂದಲೂ ಗೋಪೂಜೆ ಮಾಡುವ ಪದ್ಧತಿ ಇತ್ತು. ಆದರೆ ಆಧುನಿಕ ಕಾಲದಲ್ಲಿ ನಮ್ಮ ಜನತೆ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಅಧಿಕೃತ ಅರ್ಜಿ ಸಲ್ಲಿಕೆ
ಬಲಿಪಾಡ್ಯಮಿ ದಿನ ಗೋಪೂಜೆ ಮಾಡುವುದು ಶ್ರೇಷ್ಠ. ಈ ಪದ್ಧತಿಯನ್ನು ನಾಡಿನ ಜನತೆ ಮರೆಯಬಾರದು ಎಂದು ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.