ಕೊನೆಗೂ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ ಗೌರಿ. ಸ್ವಾತಂತ್ರ್ಯಾ ದಿನಾಚರಣೆಗೆ ತೆರೆಗೆ ಬರುತ್ತಿದೆ ಸಮರ್ಜಿತ್ ಲಂಕೇಶ್ ಮೊದಲ ಸಿನಿಮಾ. ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಚಿತ್ರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದರೀಗ ಆ ಕುತುಹಲಕ್ಕೆ ತೆರೆ ಬಿದ್ದಿದೆ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಅವರ ಪುತ್ರ ಸಮರ್ಜಿತ್ ಮತ್ತು ನಟಿ ಸಾನಿಯಾ ಅಭಿನಯದ ಮೊದಲ ಸಿನಿಮಾವಿದು. ಇಂದಿ ಸಿನಿಮಾ ತಂಡ ಮಾಧ್ಯಮದ ಮುಂದೆ ಹಾಜರಾಗುವ ಮೂಲಕ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಗೌರಿ ಸಿನಿಮಾ ವಿಶೇಷ ದಿನದಂದು ತೆರೆಗೆ ಬರಲಿದೆ ಎಂದು ಹೇಳಿದರು.
ಹೌದು ‘ಗೌರಿ’ (Gowri) ಸಿನಿಮಾ ಆಗಸ್ಟ್ 15 ಸ್ವಾತಂತ್ರ್ಯಾ ದಿನಾಚರಣೆಗೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಗೌರಿ ತಂಡ ಇಂದು ಕಾಲೇಜಿನಲ್ಲಿ ಕಾರ್ಯಕ್ರಮ ಮಾಡುವ ಮೂಲಕ ಅದ್ದೂರಿಯಾಗಿ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಬೆಂಗಳೂರಿನ MES ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿಮಾತಂಡ ‘ಗೌರಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಕಾಲೇಜಿನ ವಿದ್ಯಾರ್ಥಿಗಳ ಜೊತೆ ಕುಣಿದು ಕುಪ್ಪಳಿಸಿದ್ದ ಸಿನಿಮಾ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ‘ಕನ್ನಡದ ಯುವ ಪ್ರತಿಭೆಗಳನ್ನು ಬೆಳಸಿ. ಆಗಸ್ಟ್ 15 ಒಳ್ಳೆಯ ದಿನ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಇದು. ಎಲ್ಲಾ ಸಿನಿಮಾಗಳು ಕನ್ನಡ ಸಿನಿಮಾಗಳೇ ಪ್ರೋತ್ಸಾಹಿಸಬೇಕು’ಎಂದರು. ಕನಸು ನನಸಾದ ಸಮಯಚಿದು. ನನ್ನ ಮೊದಲ ಸಿನಿಮಾವನ್ನು ಎಲ್ಲರೂ ನೋಡಿ ಎಂದರು.
ಈಗಾಗಲೇ ಸಿನಿಮಾದಿಂದ ವೈರಲ್ ಆಗಿರುವ ‘ಟೈಮ್ ಬರುತ್ತೆ…’ ಮತ್ತು ಧೂಳ್ ಎಬ್ಬಿಸಾವ…ಹಾಡಿಗೆ ವಿದ್ಯಾರ್ಥಿಗಳ ಜೊತೆ ಸಮರ್ಥಿಜ್ ಲಂಕೇಶ್ ಮತ್ತು ನಾಯಕಿ ಸಾನ್ಯಾ ಅಯ್ಯರ್ ಡಾನ್ಸ್ ಮಾಡಿ ಸಂಭ್ರಮಿಸಿದರು. ನಿಮ್ಮ ತಂಡದ ಖುಷಿಗೆ ಮತ್ತಷ್ಟು ಜೊಷ್ ತುಂಬಿದರು ವಿದ್ಯಾರ್ಥಿಗಳು.