Connect with us

ಕೊರೊನಾದಿಂದ ನಿಧನವಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಜನ್ಮದಿನಾಚರಣೆಯಲ್ಲಿ ಡಿಕೆಶಿ ಭಾಗಿ

ಕೊರೊನಾದಿಂದ ನಿಧನವಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಜನ್ಮದಿನಾಚರಣೆಯಲ್ಲಿ ಡಿಕೆಶಿ ಭಾಗಿ

– ಆಹಾರ, ತರಕಾರಿ ಕಿಟ್ ವಿತರಣೆ

ಬೆಂಗಳೂರು: ಕೊರೊನಾದಿಂದ ನಿಧನವಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಹುಟ್ಟುಹಬ್ಬದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸಿ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಫುಡ್ ಕಿಟ್ ವಿತರಿಸಿದ್ದಾರೆ.

ಕಳೆದ ತಿಂಗಳು ಕೊರೊನಾದಿಂದ ನಿಧನರಾದ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಕಾಂತರಾಜು ಅವರ ಜನ್ಮದಿನದ ಅಂಗವಾಗಿ ಮಾಗಡಿ ವಿಧಾನಸಭೆ ಕ್ಷೇತ್ರದ ಬಿಡದಿಯ ಹೆಜ್ಜಾಲದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: 10 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆಗೆ ನಿಖಿಲ್ ಕುಮಾರಸ್ವಾಮಿ ಚಾಲನೆ

ಬಳಿಕ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಡವರಿಗೆ ಆಹಾರ ಮತ್ತು ತರಕಾರಿ ಕಿಟ್ ಗಳನ್ನು ವಿತರಿಸಿದರು. ಸಂಸದ ಡಿ.ಕೆ.ಸುರೇಶ್, ಮಾಜಿ ಶಾಸಕ ಬಾಲಕೃಷ್ಣ ಮತ್ತಿತರ ಮುಖಂಡರು ಭಾಗವಹಿಸಿದ್ದರು.

Advertisement
Advertisement