ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಪಿಡಿಒ ಕೈ ಹಿಡಿದು ಚುಂಬಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 48 ವರ್ಷಗಳ ಹಿಂದೆ ಹೀಗಿತ್ತು ನನ್ನ ರೆಸ್ಯೂಮ್ – ಉದ್ಯೋಗಾಕಾಂಕ್ಷಿಗಳಿಗೆ ಆತ್ಮವಿಶ್ವಾಸ ತುಂಬಿದ ಬಿಲ್ಗೇಟ್ಸ್
ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಘಟನೆ ನಡೆದಿದ್ದು ತಳವಾಗಿ ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದೆ.