ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

Public TV
1 Min Read
Ramanagara Suicide Case

ರಾಮನಗರ: ವಿಷ ಕುಡಿದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ (Police) ತನಿಖೆಯಲ್ಲಿ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ತಿಳಿದು ಬಂದಿದ್ದು, ಪತ್ನಿಯ (Wife) ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಗಂಡನನ್ನೇ ಸುಪಾರಿ ಕೊಟ್ಟು ಗ್ರಾ.ಪಂ ಸದಸ್ಯೆ ಕೊಲೆ ಮಾಡಿಸಿರುವುದು ಬೆಳಕಿಗೆ ಬಂದಿದೆ.

ಹೌದು, ಕಳೆದ ಜೂ. 24ರಂದು ಚನ್ನಪಟ್ಟಣ (Channapatna) ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ ಸದಸ್ಯೆ ಚಂದ್ರಕಲಾ ಪತಿ ಲೋಕೇಶ್ (45) ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಲೋಕೇಶ್ ಶವದ ಬಳಿ ವಿಷದ ಬಾಟಲಿ ಇಟ್ಟು, ಸೂಸೈಡ್ ಎಂದು ಬಿಂಬಿಸಲಾಗಿತ್ತು. ಈ ಸಂಬಂಧ ಎಂ.ಕೆ.ದೊಡ್ಡಿ (MK Doddi Police) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಬಳಿಕ ಚಂದ್ರಕಲಾ ತಾನೇ ಸುದ್ದಿಗೋಷ್ಠಿ ನಡೆಸಿ, ಪತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಳು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಚಂದ್ರಕಲಾ ಫೋನ್‌ನಿಂದ ಆಕೆಯ ಅನೈತಿಕ ಸಂಬಂಧದ ಮಹತ್ವದ ಸುಳಿವು ಸಿಕ್ಕಿತ್ತು. ಇದನ್ನೂ ಓದಿ: ಮಗನ ಸಾವಿನಿಂದ ಮನನೊಂದ ತಾಯಿ – ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆ

ಯೋಗೇಶ್ ಎಂಬಾತನೊಂದಿಗೆ ಚಂದ್ರಕಲಾ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಪತಿ ಅಡ್ಡಿಯಾಗಿದ್ದ ಹಿನ್ನೆಲೆ ಪ್ರಿಯಕರನ ಜೊತೆ ಸೇರಿ ಗಂಡ ಕೊಲೆಗೆ ಸ್ಕೆಚ್ ಹಾಕಿದ್ದಳು. ಬೆಂಗಳೂರಿನ (Bengaluru) ನಾಲ್ವರು ಸುಫಾರಿ ಕಿಲ್ಲರ್‌ಗಳಿಗೆ ಹಣ ಕೊಟ್ಟ ಈ ಮಹಿಳೆ, ಪತಿಯ ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಇದನ್ನೂ ಓದಿ: Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

ಸದ್ಯ ಎಂ.ಕೆ.ದೊಡ್ಡಿ ಪೊಲೀಸರು ಗ್ರಾ.ಪಂ ಸದಸ್ಯೆ ಚಂದ್ರಕಲಾಳನ್ನ ಬಂಧಿಸಿದ್ದು, ಉಳಿದ ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

Share This Article