ಬೆಂಗಳೂರು: ಬಿಜೆಪಿ (BJP) ವತಿಯಿಂದ ಫೆಬ್ರವರಿ 9, 10, 11ರಂದು 3 ದಿನಗಳ ಕಾಲ ‘ಗ್ರಾಮ ಚಲೋ’ (Grama Chalo) ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದರು.
ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾಜೀ ಮತ್ತು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ (Narendra Modi) ಅವರ ಅಪೇಕ್ಷೆಯಂತೆ ‘ಗ್ರಾಮ ಚಲೋ’ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಕರ್ನಾಟಕ ರಾಜ್ಯದಲ್ಲಿ 28 ಸಾವಿರಕ್ಕೂ ಹೆಚ್ಚು ಹಳ್ಳಿಗಳು, 19 ಸಾವಿರ ನಗರ ಬೂತ್‌ಗಳಲ್ಲಿ ಒಟ್ಟಾರೆಯಾಗಿ 42 ಸಾವಿರ ಕಾರ್ಯಕರ್ತರು ಮೂರು ದಿನಗಳ ಕಾಲ ನಿರಂತರವಾಗಿ ಈ ಅಭಿಯಾನದಲ್ಲಿ ಭಾಗವಹಿಸುತ್ತಾರೆ ಎಂದು ವಿವರಿಸಿದರು. ಇದನ್ನೂ ಓದಿ: 2047ಕ್ಕೆ ಭಾರತವನ್ನು ಇಸ್ಲಾಮೀಕರಣ ಮಾಡುವ ತಂತ್ರ ರೂಪಿಸಲಾಗಿದೆ: ಜಗದೀಶ್ ಕಾರಂತ್
Advertisement
Advertisement
ನಾನು ಇವತ್ತು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಂಖ್ಯೆ 454, 455ರಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. 2047ನೇ ಇಸವಿಗೆ ಭಾರತವು ‘ವಿಕಸಿತ ಭಾರತ’ವಾಗಿ ಪರಿವರ್ತನೆ ಹೊಂದಬೇಕು. ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಕನಸು ನನಸಾಗಲು ಗ್ರಾಮಗಳೂ ಅಭಿವೃದ್ಧಿ ಹೊಂದಬೇಕಿದೆ ಎಂದು ವಿಶ್ಲೇಷಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕು ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಬಾಯಿ ಬಿಟ್ಟರೆ ಬರೀ ಸುಳ್ಳು – ಸಚಿವ ಪ್ರಹ್ಲಾದ್ ಜೋಶಿ ಕಿಡಿ
Advertisement
Advertisement
ಈ ನಿಟ್ಟಿನಲ್ಲಿ ‘ಗ್ರಾಮ ಚಲೋ’ ಅಭಿಯಾನವು ಉತ್ತಮ ಅಭಿಯಾನ ಆಗಲಿದೆ. ಈ ಅಭಿಯಾನದ ಮೂಲಕ ಪ್ರತಿ ಗ್ರಾಮ, ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು, ಕೇಂದ್ರ ಸರ್ಕಾರವು ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಕೊಟ್ಟ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸಲಾಗುತ್ತದೆ ಎಂದು ತಿಳಿಸಿದರು. ಈ ಅಭಿಯಾನವು ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ‘ಮೋದಿ ಮತ್ತೊಮ್ಮೆ’ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು. ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಯುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರೂ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸುತ್ತಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿ; 20 ಸಾವಿರ ಜನ ಭಾಗಿ, 11,000 ಅರ್ಜಿ ಸಲ್ಲಿಕೆ