ಗ್ರಾ. ಪಂ ಅಧ್ಯಕ್ಷೆ ಗಾದಿಗಾಗಿ ದೇವರ ಮೊರೆ – ಹರಕೆ ತೀರಿಸಲು ಹೆಲಿಕಾಪ್ಟರ್ ತಂದು ಪುಷ್ಪಾರ್ಚನೆ

Public TV
1 Min Read
HELICOPTER

ಕೋಲಾರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷೆಯಾದರೆ ಗ್ರಾಮ ದೇವರಿಗೆ ಪುಷ್ಪಾರ್ಚನೆ ಮಾಡುವುದಾಗಿ ಹರಕೆ ಹೊತ್ತುಕೊಂಡಿದ್ದ ಹಿನ್ನೆಲೆ ಭಕ್ತೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಿ ಹರಕೆ ತೀರಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.

HELICOPTER

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ದೋಣಿಮಡಗು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳ ಮಹದೇವ್ ಹರಕೆ ತೀರಿಸಿದ ಅಧ್ಯಕ್ಷೆಯಾಗಿದ್ದಾರೆ. ಮಂಜುಳ ಮಹದೇವ್ ಗ್ರಾಮ ಪಂಚಾಯತ್ ಅಧ್ಯಕ್ಷರಾದರೆ ದೇವರ ರಥೋತ್ಸವದ ವೇಳೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡುವುದಾಗಿ ಹರಕೆ ಹೊತ್ತಿದ್ದರು. ಆ ಬಳಿಕ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಅಧ್ಯಕ್ಷರಾಗಿದ್ದರು. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 4ನೇ ದಿನವೂ ಭಾರೀ ಮಳೆ

HELICAPTER

ಅಧ್ಯಕ್ಷರಾದ ಬಳಿಕ ಹರಕೆ ತೀರಿಸುವ ಸಲುವಾಗಿ ಇಂದು ರಾಲ್ಲಗಂಗಮ್ಮ ದೇವರ ರಥೋತ್ಸವದ ವೇಳೆ ಹೆಲಿಕಾಪ್ಟರ್ ಮೂಲಕ ದೇವರಿಗೆ ಪುಷ್ಪಾರ್ಚನೆ ಮಾಡಿ ಹರಕೆ ತೀರಿಸಿದರು. ರಥೋತ್ಸವದಲ್ಲಿ ಸಾವಿರಾರು ಭಕ್ತರು ನೆರೆದಿದ್ದರು. ಇದನ್ನೂ ಓದಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯೋ? ಕೊಲೆಯೋ: ಈಶ್ವರಪ್ಪ ಅನುಮಾನ

Share This Article