ಹಾಸನ: ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು ಬಳಿಕ ಹಳ್ಳಕ್ಕೆ ಬಿದ್ದ ಪರಿಣಾಮ ಹನುಮನಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಳೇಕೋಟೆಯಲ್ಲಿ ನಡೆದಿದೆ. ಹನುಮನಹಳ್ಳಿ ಗ್ರಾ.ಪಂ. ಸದಸ್ಯ ಮಲ್ಲ (38) ಮೃತ ದುರ್ದೈವಿ.
ಸೋಮವಾರ ರಾತ್ರಿ ಹೊಳೆನರಸೀಪುರದಿಂದ ಹಾಸನ-ಮೈಸೂರು ಹೆದ್ದಾರಿಯ ರಸ್ತೆಯಲ್ಲಿ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಹಳೇಕೋಟೆಯ ಬಳಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಮಲ್ಲ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.