ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ (Ricky Kej) ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ (National Anthem) ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ (Independence Day) ಮುನ್ನ ದಿನ ಅಂದ್ರೆ ಇದೇ 14ರಂದು 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಲಿದೆ.
ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ರಿಕ್ಕಿ ಕೇಜ್ ಮಾಹಿತಿ ಹಂಚಿಕೊಂಡಿದ್ದಾರೆ.
ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆ ಎಂದು ಸಂತಸ ಹಂಚಿಕೊಂಡರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]