ಚಿತ್ರರಂಗಕ್ಕೆ ಲಂಕೇಶ್ ಮೊಮ್ಮಗ ಸಮರ್ಜಿತ್ ಗ್ರ್ಯಾಂಡ್ ಎಂಟ್ರಿ

Public TV
2 Min Read
Samarjit Lankesh 3

ಸಾಹಿತ್ಯ ಮತ್ತು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಲಂಕೇಶ್ ಅವರ ಮೊಮ್ಮಗ ಸಮರ್ಜಿತ್ ಲಂಕೇಶ್ ಗ್ಯಾಂಡ್ ಆಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಲಂಕೇಶ್ ಅವರ ಪುತ್ರ ಇಂದ್ರಜಿತ್ ಲಂಕೇಶ್ (Indrajit Lankesh) ಮತ್ತು ಪುತ್ರಿ ಕವಿತಾ ಲಂಕೇಶ್ ಸಿನಿಮಾ ರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹೊಸ ಬಗೆಯ ಸಿನಿಮಾಗಳನ್ನು ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮಿಂಚಿದ್ದಾರೆ. ಇದೀಗ ಇಂದ್ರಜಿತ್ ಪುತ್ರ ಸಮರ್ಜಿತ್ (Samarjit Lankesh) ಮೂರನೇ ತಲೆಮಾರಾಗಿ ಸ್ಯಾಂಡಲ್ ವುಡ್ (Sandalwood) ಪ್ರವೇಶ (Entry) ಮಾಡುತ್ತಿದ್ದಾರೆ.

Samarjit Lankesh 5

ತಂದೆ ಸಿನಿಮಾ ನಿರ್ದೇಶಕ ಅನ್ನುವ ಕಾರಣಕ್ಕಾಗಿ ಸಮರ್ಜಿತ್ ಚಿತ್ರರಂಗ ಪ್ರವೇಶ ಮಾಡುತ್ತಿಲ್ಲ. ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡೇ ಅಖಾಡಕ್ಕೆ ಇಳಿಯುತ್ತಿದ್ದಾರೆ. ಹಾಗಾಗಿ ಎಂಟ್ರಿಯಲ್ಲೇ ಭರವಸೆ ಮೂಡಿಸುತ್ತಾರೆ. ಈಗಾಗಲೇ ರಂಗಭೂಮಿಯಲ್ಲೂ ಕೆಲಸ ಮಾಡಿದ ಅನುಭವವೂ ಅವರ ಜೊತೆಗಿದೆ. ಇದನ್ನೂ ಓದಿ:‘ಪುನರ್ ವಿವಾಹ’ ನಟ ಅಥರ್ವ್‌ ಹೊಸ ಚಿತ್ರಕ್ಕೆ ಸುದೀಪ್ ಸಾಥ್

Samarjit Lankesh 4

ನ್ಯೂಯಾರ್ಕ್ ಅಕಾಡೆಮಿಯಲ್ಲಿ ಸಿನಿಮಾ ಸಂಬಂಧಿಸಿದ ಕೋರ್ಸ್ ಮಾಡಿರುವ ಸಮರ್ಜಿತ್, ಅಲ್ಲಿ ನಟನಾ ತರಬೇತಿಯನ್ನು ಪಡೆದಿದ್ದಾರೆ. ಚೇತನ್ ಡಿಸೋಜಾ ಬಳಿ ಸಾಹಸ ಕಲೆಯನ್ನು ಕಲಿತುಕೊಂಡರೆ, ಮುರಳಿ ಬಳಿ ಡಾನ್ಸ್ ಮತ್ತು ಇಬ್ಬರು ನೀನಾಸಂ ಶಿಕ್ಷಕರು ಸಮರ್ಜಿತ್ ತರಬೇತಿ ನೀಡಿದ್ದಾರೆ.

Samarjit Lankesh 1

ಜೊತೆಗೆ ಯೋಗರಾಜ್ ಭಟ್ ಅವರ ಬಳಿ ಎರಡು ಸಿನಿಮಾಗಳಿಗೆ ಸಮರ್ಜಿತ್ ಅಸಿಸ್ಟೆಂಟ್ ಡೈರೆಕ್ಟರ್ ಆಗಿ  ಕೆಲಸ ಮಾಡಿದ ಅನುಭವ ಕೂಡ ಇದೆ. ಇಷ್ಟೆಲ್ಲ ತರಬೇತಿಯ ಜೊತೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಮತ್ತು ಜಾಹೀರಾತು ಕ್ಷೇತ್ರದಲ್ಲೂ ಒಂದಷ್ಟು ಅನುಭವ ಪಡೆದಿದ್ದಾರೆ. ಈ ರೀತಿ ತಯಾರಿ ಮಾಡಿಕೊಂಡು ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ.

Samarjit Lankesh 2

ಸಮರ್ಜಿತ್ ನಟನೆಯ ಸಿನಿಮಾ ನಿರ್ದೇಶಕರು ಯಾರು, ಯಾರು ನಿರ್ಮಾಣ ಮಾಡುತ್ತಾರೆ ಇತ್ಯಾದಿ ವಿಷಯಗಳನ್ನು ಸದ್ಯಕ್ಕೆ ಬಹಿರಂಗಗೊಳಿಸಿಲ್ಲ. ಆದರೆ, ಅದ್ದೂರಿಯಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುವುದನ್ನು ಸಮರ್ಜಿತ್ ಅವರ ತಂದೆ, ನಿರ್ದೇಶಕ ಇಂದ್ರಜಿತ್ ಖಚಿತ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

 

ಸಮರ್ಜಿತ್ ಸಿನಿಮಾ ರಂಗಕ್ಕೆ ಬರುತ್ತಿರುವುದು ನಿಜ. ಎಲ್ಲ ರೀತಿಯ ತರಬೇತಿಯನ್ನು ಪಡೆದುಕೊಂಡೇ ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದಾರೆ. ನಟನೆಯ ಜೊತೆ ಜೊತೆಗೆ ತಾಂತ್ರಿಕ ಅಂಶಗಳನ್ನು ತಿಳಿದುಕೊಂಡು ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿರುವುದು ಖುಷಿಯಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್.

Web Stories

Share This Article