ಇಂಡಿಯಾ ಗೇಟ್‍ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಭವ್ಯ ಪ್ರತಿಮೆ ಅನಾವರಣ: ಮೋದಿ

Public TV
2 Min Read
Netaji Subhash Chandra Bose

ನವದೆಹಲಿ: ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವುದಾಗಿ ತಿಳಿಸಿದ್ದಾರೆ.

ಸುಭಾಷ್ ಚಂದ್ರ ಬೋಸ್ ಅವರು 1897ರ ಜನವರಿ 23ರಂದು ಜನಿಸಿದ್ದು, ಭಾನುವಾರ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ದೆಹಲಿಯ ಇಂಡಿಯಾ ಗೇಟ್‍ನಲ್ಲಿ ಸ್ಥಾಪಿಸುವುದಾಗಿ ಮೋದಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

NARENDRA MODI

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೂ, ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಇರುತ್ತದೆ. ಜನವರಿ 23ರಂದು ನೇತಾಜಿ ಅವರ ಹುಟ್ಟುಹಬ್ಬದ ದಿನ ಹೊಲೊಗ್ರಾಮ್ ಪ್ರತಿಮೆಯನ್ನು ನಾನು ಅನಾವರಣಗೊಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ

ಈ ಮುನ್ನ ಕಿಂಗ್ ಜಾರ್ಜ್ ವಿ ಅವರ ಪ್ರತಿಮೆ ಈ ಸ್ಥಳದಲ್ಲಿತ್ತು. ಆದರೆ ಅದನ್ನು 1968ರಲ್ಲಿ ತೆಗೆದುಹಾಕಲಾಗಿತ್ತು. ಇದೀಗ ನೇತಾಜಿ ಅವರ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ.

ಇಡೀ ರಾಷ್ಟ್ರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಗ್ರಾನೈಟ್‍ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‍ನಲ್ಲಿ ಸ್ಥಾಪಿಸಲಾಗುತ್ತಿದೆ ಎಂಬ ವಿಚಾರವನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗುತ್ತಿದೆ. ಭಾರತ ಅವರಿಗೆ ಚಿರಋಣಿಯಾಗಿರುತ್ತದೆ ಎಂಬುವುದನ್ನು ಇದು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಡಾನ್ಸ್ ಮಾಡಿದ ವಧುವಿನ ಕೆನ್ನೆಗೆ ಹೊಡೆದ ವರ- ಮದುವೆ ಮುರಿದು ಬಿತ್ತು

ಈ ಮುನ್ನ ಬಿಜೆಪಿ ನಾಯಕರಾಗಿರುವ ಚಂದ್ರಬೋಸ್ ಅವರು ದೆಹಲಿಯ ಇಂಡಿಯಾ ಗೇಟ್ ಎದುರು ನೇತಾಜಿ ಅವರ ಪ್ರತಿಮೆ ಸ್ಥಾಪಿಸುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು. ಕರೆನ್ಸಿ ನೋಟುಗಳ ಮೇಲೆ ನೇತಾಜಿ ಅವರ ಭಾವ ಚಿತ್ರವನ್ನು ಮುದ್ರಿಸಲು ಮತ್ತು ಜನವರಿ 23ರಂದು ರಾಷ್ಟ್ರೀಯ ರಜಾ ದಿನವೆಂದು ಘೋಷಿಸುವಂತೆ ಪ್ರಧಾನಿ ಬಳಿ ಮನವಿ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *