ಬೆಂಗಳೂರು: ಇಂದು ವೈಕುಂಠ ಏಕಾದಶಿ (Vaikunta Ekadashi) ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ಕಾನ್ ದೇವಸ್ಥಾನ (Iskon Temple) ದಲ್ಲಿ ವಿಶೇಷ ಪೂಜೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತರು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದಾರೆ.
ಇಂದು ರಾಜ್ಯದೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ. ಅಂತೆಯೇ ಇಸ್ಕಾನ್‍ನಲ್ಲಿ ಅದ್ಧೂರಿಯ ವೈಕುಂಠ ಏಕಾದಶಿ ಆಚರಣೆ ಮಾಡಲಾಯಿತು. ಇಸ್ಕಾನ್ ದೇವಸ್ಥಾನದಲ್ಲಿ ರಾತ್ರಿ 3ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ಆತಂಕದ ನಡುವೆಯೂ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ.
ಬೆಂಗಳೂರಿನ ಇಸ್ಕಾನ್ ನಲ್ಲಿ ಇಂದು ಒಂದು ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ ಸಾಧ್ಯತೆ ಇದೆ. ಇಂದು ರಾತ್ರಿ 11 ರವರಗೂ ಇಸ್ಕಾನ್ ನಲ್ಲಿ ವಿಶೇಷ ಪೂಜೆಗಳು ನಡೆಯಲಿದೆ. ಈಗಾಗಲೇ ದೇವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ರು ರಾಧಿಕಾ ಪಂಡಿತ್
ಕೃಷ್ಣನ ದರ್ಶನ ಪಡೆದ ಬಳಿಕ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಮತನಾಡಿ, ಪ್ರತಿವರ್ಷದಂತೆ ವೈಕುಂಠ ಏಕಾದಶಿಯಂದು ದೇವರ ದರ್ಶನ ಮಾಡಿದ್ದೇವೆ. ಇಸ್ಕಾನ್ ನಲ್ಲಿ ದೇಗುಲದಲ್ಲಿ ಓಡಾಡಿದ್ರೇ ನೆಮ್ಮದಿ ಸಿಗುತ್ತದೆ. ಅಮಿತ್ ಶಾ ಬಂದು ಹೋದ ಎಂದಿನಂತೆ ನಡೆಯುತ್ತಿದೆ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಎಲೆಕ್ಷನ್ ಎಪ್ರಿಲ್ ಗೆ ಆಗುತ್ತೆ ಎಂದರು.
ಅರವಿಂದ ಲಿಂಬಾವಳಿ ಹೆಸರು ಬರೆದು ಡೆತ್ ನೋಟ್ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಕ್ಷೇತ್ರದ ಕಾರ್ಯಕ್ರಮದಲ್ಲಿ ಬ್ಯುಸಿ ಇದ್ದೆ ಎಂದು ಹೇಳಿದರು.