ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ – ಭಜನೆಯೊಂದಿಗೆ ಅದ್ಧೂರಿ ಮೆರವಣಿಗೆ

Public TV
1 Min Read
ayodhya mantrakshte dharwad 1

ಧಾರವಾಡ: ದೇಶದ ಹಳ್ಳಿ ಹಳ್ಳಿಗಳಲ್ಲೂ ಈಗ ರಾಮ ಜಪ ಆರಂಭಗೊಂಡಿದೆ. ಇದೇ ಜ.22 ರಂದು ಅಯೋಧ್ಯೆಯಲ್ಲಿ (Ayodhya) ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಲಿದ್ದು, ಈ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿದೆ.

ಈಗಾಗಲೇ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ (Mantrakshate) ಹಾಗೂ ಪ್ರಭು ಶ್ರೀರಾಮಚಂದ್ರನ ಫೋಟೋಗಳನ್ನು ಜ.22 ರಂದು ಪೂಜೆ ಮಾಡಲು ಎಲ್ಲೆಡೆ ವಿತರಣೆ ಮಾಡಲಾಗುತ್ತಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ಹಾಗೂ ಶ್ರೀರಾಮನ ಭಾವಚಿತ್ರಗಳನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಯಿತು. ಇದನ್ನೂ ಓದಿ: Ram Mandir: ಏನಿದು ಪ್ರಾಣ ಪ್ರತಿಷ್ಠೆ? ಆಚರಣೆ ಹೇಗಿರುತ್ತೆ?

ayodhya mantrakshte dharwad 2

ಆರ್‌ಎಸ್‌ಎಸ್ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರು ಸೇರಿದಂತೆ ಗ್ರಾಮಸ್ಥರೆಲ್ಲರೂ ಸೇರಿ ಭಜನಾ ಮೆರವಣಿಗೆ ಮಾಡುವ ಮೂಲಕ ಮಂತ್ರಾಕ್ಷತೆ ಮತ್ತು ಶ್ರೀರಾಮನ ಭಾವಚಿತ್ರವನ್ನು ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿದರು.

ಈ ಮೆರವಣಿಗೆಯಲ್ಲಿ ಹೆಣ್ಣುಮಕ್ಕಳೂ ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮಂತ್ರಾಕ್ಷತೆಯ ಬಾಕ್ಸ್ ಹಿಡಿದು ಮೆರವಣಿಗೆ ಹೊರಟ ಯುವಕರ ಪಾದಕ್ಕೆ ಗ್ರಾಮಸ್ಥರು ನೀರು ಹಾಕಿ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆಯನ್ನು ಪುಣ್ಯ ಭಾವದಿಂದ ಸ್ವಾಗತಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಸಹ ಒದಗಿಸಲಾಗಿತ್ತು. ಇದನ್ನೂ ಓದಿ: Ram Mandir Inauguration: ತಿರುಪತಿಯಿಂದ ಅಯೋಧ್ಯೆಗೆ 1 ಲಕ್ಷ ಲಡ್ಡು ಪೂರೈಕೆ

Share This Article