– ಮುಂದಿನ ಒಂದು ವಾರದಲ್ಲಿ AQI 600ರ ಗಡಿ ದಾಟುವ ಎಚ್ಚರಿಕೆ
ನವದೆಹಲಿ : ದೀಪಾವಳಿ (Diwali) ಮೊದಲ ದಿನವೇ ದೆಹಲಿಯಲ್ಲಿ ವಾಯು ಮಾಲಿನ್ಯ (Air Pollution) ಹೆಚ್ಚಿದೆ. ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ AQI 400ರ ಗಡಿ ದಾಟಿದೆ. ಮುಂದಿನ ಒಂದು ವಾರದಲ್ಲಿ ಈ ಪ್ರಮಾಣ AQI 600 ಗಡಿ ದಾಟಬಹುದು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಎಚ್ಚರಿಕೆ ನೀಡಿದೆ.
ದೆಹಲಿಯ 38 ಮೇಲ್ವಿಚಾರಣಾ ಕೇಂದ್ರಗಳ ಪೈಕಿ 24 ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ʼತುಂಬಾ ಕಳಪೆʼ ಮಟ್ಟವನ್ನು ದಾಖಲಿಸಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಸೋಮವಾರ ಬೆಳಗ್ಗೆ, ಆನಂದ್ ವಿಹಾರ್ ನಗರದಲ್ಲಿ ಅತ್ಯಂತ ವಿಷಕಾರಿ ಗಾಳಿಯನ್ನು ವರದಿ ಮಾಡಿದೆ, AQI 417 ರೊಂದಿಗೆ, ಇದು ʼತೀವ್ರ ಕಳಪೆʼ ವರ್ಗಕ್ಕೆ ಇಳಿದಿದೆ. ಇದನ್ನೂ ಓದಿ: ಕುಣಿಗಲ್ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ
ವಜೀರ್‌ಪುರ (364), ವಿವೇಕ್ ವಿಹಾರ್ (351), ದ್ವಾರಕಾ (335), ಮತ್ತು ಆರ್‌ಕೆ ಪುರಂ (323) ಸೇರಿದಂತೆ 12 ನಿಲ್ದಾಣಗಳು ಗಾಳಿಯ ಗುಣಮಟ್ಟವನ್ನು ʼತುಂಬಾ ಕಳಪೆʼ ವ್ಯಾಪ್ತಿಯಲ್ಲಿ ವರದಿ ಮಾಡಿವೆ. ಸಿಪಿಸಿಬಿ ದತ್ತಾಂಶದ ಪ್ರಕಾರ, ಸಿರಿ ಫೋರ್ಟ್, ದಿಲ್ಶಾದ್ ಗಾರ್ಡನ್ ಮತ್ತು ಜಹಾಂಗೀರ್‌ಪುರಿ ಮುಂತಾದ ಇತರ ಪ್ರದೇಶಗಳು 318 ಎಕ್ಯೂಐ ದಾಖಲಿಸಿವೆ. ಪಂಜಾಬಿ ಬಾಗ್ 313, ನೆಹರು ನಗರ 310, ಅಶೋಕ್ ವಿಹಾರ್ 305 ಮತ್ತು ಬವಾನಾ 304ರ ವಾಯು ಗುಣಮಟ್ಟ ಸೂಚ್ಯಂಕವನ್ನು ದಾಖಲಿಸಿವೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ದೆಹಲಿಯಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಹಿನ್ನಲೆ GRAP ಹಂತ IIರ ನಿಯಮಗಳನ್ನು ಜಾರಿ ಮಾಡಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಹಂತ II ಆಕ್ಷನ್ ಕ್ವಾಲಿಟಿ ಇಂಡೆಕ್ಸ್ (AQI) 301 ರಿಂದ 400ರವರೆಗಿನ ʼಅತ್ಯಂತ ಕಳಪೆʼ ವರ್ಗಕ್ಕೆ ಸೇರಿದಾಗ ಜಾರಿಗೊಳಿಸಲಾಗುತ್ತದೆ. ಇದು ಹಂತ I ನ ನಿಯಮಗಳನ್ನು ಸೇರಿಸಿ ಜಾರಿಯಲ್ಲಿರುತ್ತದೆ. ಇದನ್ನೂ ಓದಿ: ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರು ದುರ್ಮರಣ
ಈ ನಿಯಮಗಳ ಪ್ರಕಾರ ಮಾಲಿನ್ಯ ನಿಯಂತ್ರಣಕ್ಕೆ ಬರುವವರೆಗೂ ಕಟ್ಟಡ ನಿರ್ಮಾಣ ಕಾಮಗಾರಿಗಳ ನಿಲ್ಲಿಸಬೇಕಾಗುತ್ತದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಓಪನ್ ಈಟರಿಗಳಲ್ಲಿ ತಂದೂರ್‌ಗಳಲ್ಲಿ ಕಲ್ಲಿದ್ದಲು ಬಳಕೆ ನಿಷೇಧ ಮಾಡಲಾಗುತ್ತದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಡೀಸೆಲ್ ಜನರೇಟರ್‌ಗಳ ಬಳಕೆಯನ್ನು ನಿರ್ಬಂಧಿಸಲಾಗುತ್ತದೆ. ಇದನ್ನೂ ಓದಿ: ನಾಡಿನಾದ್ಯಂತ ದೀಪಾವಳಿ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ
ಅಂತರ್ ರಾಜ್ಯ ಬಸ್‌ಗಳ ಪ್ರವೇಶವನ್ನು CNG, ಎಲೆಕ್ಟ್ರಿಕ್ ಅಥವಾ BS-VI ಡೀಸೆಲ್ ಇಂಧನದ್ದಕ್ಕೆ ಮಾತ್ರ ಸೀಮಿತಗೊಳಿಸುವುದು. ದೆಹಲಿಯಲ್ಲಿ ಸಾರ್ವಜನಿಕ ಸಾರಿಗೆಯನ್ನು ಬಲಪಡಿಸುವುದು, CNG ಮತ್ತು ಎಲೆಕ್ಟ್ರಿಕ್ ಬಸ್‌ಗಳನ್ನು ಹೆಚ್ಚಿಸುವುದು, ಮೆಟ್ರೋ ಸೇವೆಗಳ ಆಪರೇಷನ್ ಫ್ರೀಕ್ವೆನ್ಸಿಯನ್ನು ಹೆಚ್ಚಿಸುವುದು, ಖಾಸಗಿ ವಾಹನಗಳನ್ನು ತಡೆಯಲು ಪಾರ್ಕಿಂಗ್ ಶುಲ್ಕಗಳನ್ನು ಹೆಚ್ಚಿಸಲಾಗುವುದು. ಇದನ್ನೂ ಓದಿ: ಊರಿಗೆ ತೆರಳಿದ ಜನ – ಮೆಜೆಸ್ಟಿಕ್ ಬಸ್‌ನಿಲ್ದಾಣ ಖಾಲಿ ಖಾಲಿ
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ದೀಪಾವಳಿಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ನಿವಾಸಿಗಳಿಗೆ ಶುಭ ಹಾರೈಸಿದರು ಮತ್ತು ಸುಪ್ರೀಂ ಕೋರ್ಟ್ ಆದೇಶದಂತೆ ಎಲ್ಲರೂ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚಿತ್ತಾಪುರ ಆಯ್ತು ಈಗ ಸೇಡಂ – ಕೊನೆ ಕ್ಷಣದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಬ್ರೇಕ್
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಪಟಾಕಿಗಳನ್ನು ಬೆಳಿಗ್ಗೆ 6ರಿಂದ 7ರವರೆಗೆ ಮತ್ತು ನಂತರ ರಾತ್ರಿ 8ರಿಂದ ರಾತ್ರಿ 10ರವರೆಗೆ ಮಾತ್ರ ಮಾರಾಟ ಮಾಡಲು ಅವಕಾಶವಿರುತ್ತದೆ ಮತ್ತು ಅಕ್ಟೋಬರ್ 18 ರಿಂದ 20ರವರೆಗೆ ಮಾರಾಟ ಮಾಡಲಾಗುತ್ತದೆ. ದೀಪಗಳನ್ನು ಬೆಳಗಿಸುವ ಮೂಲಕ, ರಂಗೋಲಿ ಬಿಡಿಸುವ ಮೂಲಕ ಮತ್ತು ಸಿಹಿತಿಂಡಿಗಳನ್ನು ಹಂಚಿಕೊಳ್ಳುವ ಮೂಲಕ ಸಾಂಪ್ರದಾಯಿಕ ರೀತಿಯಲ್ಲಿ ಬೆಳಕಿನ ಹಬ್ಬವನ್ನು ಆಚರಿಸಲು ಜನರಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಭಾರೀ ಸುಂಕ ಹಾಕ್ತೇವೆ: ಭಾರತಕ್ಕೆ ಟ್ರಂಪ್ ಎಚ್ಚರಿಕೆ


