ಕಿಚ್ಚ ಸುದೀಪ್ (Kichcha Sudeep) ನಟನೆಯ ‘ಮ್ಯಾಕ್ಸ್’ (Max Film) ಜು.16ರಂದು ಬಹುಭಾಷೆಗಳಲ್ಲಿ ಟೀಸರ್ ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಪಡೆದಿದೆ. ಎಲ್ಲಾ ಭಾಷೆಯಲ್ಲೂ ಮಾಕ್ಸ್ ಚಿತ್ರದ ಟೀಸರ್ ಝಲಕ್ ನೋಡಿ ಫಿದಾ ಆಗಿದ್ದಾರೆ. ಈ ಬೆನ್ನಲ್ಲೇ ಮ್ಯಾಕ್ಸ್ ಸಿನಿಮಾ ಕಥೆ ಹೇಗಿರಬಹುದು ಎಂದೆಲ್ಲಾ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ಧ್ಯಾನ್, ಸದಾ ನಟನೆಯ ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ


ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಮ್ಯಾಕ್ಸ್’ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮಿ ಶರತ್ ಕುಮಾರ್ (Varalaxmi Sarathkumar), ಸಂಯುಕ್ತ ಹೊರನಾಡು (Samyukta Hornad), ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮತ್ತು ಸುದೀಪ್ ಅವರ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

