Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Belgaum

ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Public TV
Last updated: December 16, 2025 3:08 pm
Public TV
Share
3 Min Read
DK Shivakumar 5
SHARE

ಬೆಳಗಾವಿ: ವಿಧಾನಸಭೆಯಲ್ಲಿಂದು ಗ್ರೇಟರ್ ಬೆಂಗಳೂರು (GBA) ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ (DK Shivakumar) ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು. ಇದನ್ನೂ ಓದಿ: ಇನ್ನೂ 26 ವೈದ್ಯಕೀಯ ಸೀಟು ಉಳಿಕೆ, ಯುಜಿ ವೈದ್ಯಕೀಯ-ಸ್ಟ್ರೇ ವೇಕೆನ್ಸಿ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ: ಕೆಇಎ

ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪರಿಷತ್ ಸದಸ್ಯರನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲು ಈ ತಿದ್ದುಪಡಿ ತರಲಾಗಿದೆ. ಇನ್ನು ಮುಖ್ಯಮಂತ್ರಿಗಳೇ ಜಿಬಿಎ ಮುಖ್ಯಸ್ಥರಾಗಿರುವ ಹಿನ್ನೆಲೆ ಮುಖ್ಯ ಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಹೆಸರು ಸೇರಿಸಲಾಗಿದೆ. ಇನ್ನು ಹಣಕಾಸು ಇಲಾಖೆ ಕಾರ್ಯದರ್ಶಿಗಳನ್ನು ಈ ಸದಸ್ಯರ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ನಡೆದ ಜಿಬಿಎ ಮೊದಲ ಸಭೆಯಲ್ಲಿ ನಾವು ಈ ವಿಚಾರವನ್ನು ಗಮನಿಸಿದೆವು. ವಿರೋಧ ಪಕ್ಷದ ಸದಸ್ಯರು ತಮ್ಮ ರಾಜಕೀಯ ನಿಲುವಿನಿಂದಾಗಿ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ನಾವು ಈ ತಿದ್ದುಪಡಿ ತಂದು ಇವರುಗಳನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲಾಗುತ್ತಿದೆ ಎಂದು ತಿಳಿಸಿದರು.

ವಿರೋಧ ಪಕ್ಷದ ಸಲಹೆಯಂತೆ ಜಿಬಿಎ ನಾಮನಿರ್ದೇಶಿತ ಸದಸ್ಯತ್ವವನ್ನು ಕೈಬಿಡುತ್ತೇವೆ:
ಈ ವೇಳೆ ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ ಅವರು ಮಾತನಾಡಿ, ಈಗಾಗಲೇ 369 ಪಾಲಿಕೆ ಸದಸ್ಯರಿರುತ್ತಾರೆ. ಸರ್ಕಾರ 20 ಸಾವಿರ ಜನರಿಗೆ ಒಬ್ಬ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಿದರೆ, ಮತ್ತೆ 369 ಮಂದಿ ಸದಸ್ಯರು ಬರುತ್ತಾರೆ. ಇದು ಯಾವ ರೀತಿ ಸೂಕ್ತ ಎಂಬ ಗೊಂದಲ ಜನರಲ್ಲಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಯಾವುದೇ ರೀತಿಯ ಚುನಾವಣೆ ನಡೆಯುವುದಿಲ್ಲ. ಇದು ರಾಜ್ಯಮಟ್ಟದ ಸಂಸ್ಥೆಯಾಗಿದೆ. ಈ ವಿಚಾರವಾಗಿ ಸದ್ಯಕ್ಕೆ ಸಮಸ್ಯೆ ಬರುವುದಿಲ್ಲ. ಮುಂದೆ ಹೊಸ ಪ್ರದೇಶವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡಾಗ ಆ ಭಾಗದಲ್ಲಿ 6 ತಿಂಗಳ ಒಳಗಾಗಿ ಚುನಾವಣೆ ನಡೆಸಬೇಕಾಗುತ್ತದೆ. ಈ ಪ್ರದೇಶದಲ್ಲಿ ಯಾರಾದರೂ ಪಂಚಾಯಿತಿ ಸದಸ್ಯರಾಗಿದ್ದರೆ, ಅವರಿಗೆ ಇದರಲ್ಲಿ ಮತದಾನದ ಹಕ್ಕು ಬರುವುದಿಲ್ಲ. ಈ ಬದಲಾವಣೆಯ ಹಂತದಲ್ಲಿ ಆ ಪ್ರದೇಶವನ್ನು ಪ್ರತಿನಿಧಿಸಲು ಒಂದು ಅವಕಾಶ ಕಲ್ಪಿಸಿದ್ದೇವೆ. ಇದು ಅಗತ್ಯವಿಲ್ಲ, ಬೇಡ ಎಂದರೆ ಇದನ್ನು ತೆಗೆದುಹಾಕಲು ಸಿದ್ಧವಿದ್ದೇನೆ. ನಿಮ್ಮ ಸಲಹೆಯಂತೆ ನಾಮನಿರ್ದೇಶಿತ ಸದಸ್ಯರ ಸೇರ್ಪಡೆಯನ್ನು ಕೈಬಿಡುತ್ತೇನೆ ಎಂದರು.

ಜನಪ್ರತಿನಿಧಿಗಳಿಗೆ ಒಂದೇ ಕಡೆ ಮತದಾನದ ಹಕ್ಕು ಇರಬೇಕು:
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಒಂದೊಂದು ನಗರ ಸಭೆ, ಪುರಸಭೆಗಳಿಗೆ ಬದಲಾವಣೆ ಮಾಡಿಕೊಂಡು ಹೋಗುತ್ತಿರುತ್ತಾರೆ. ಬೆಂಗಳೂರು ಪಾಲಿಕೆ ಚುನಾವಣೆ, ಬಳ್ಳಾರಿ ನಗರ ಸಭೆ ಚುನಾವಣೆ, ಬೀದರ್‌ನಲ್ಲಿ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ಇದು ನಕಲಿ ಮತದಾನದಂತಾಗುತ್ತದೆ. ಹೀಗಾಗಿ ಅವರು ಯಾವುದಾದರೂ ಒಂದು ಕಡೆ ಐದು ವರ್ಷ ತಮ್ಮ ಮತದಾನದ ಅಧಿಕಾರ ಹೊಂದಿರಬೇಕು. ಇದಕ್ಕೆ ಸ್ಪಷ್ಟನೆ ನೀಡಿದ ಶಿವಕುಮಾರ್ ಅವರು, ನಾನು ವಿರೋಧ ಪಕ್ಷದ ನಾಯಕರ ಸಲಹೆಯನ್ನು ಒಪ್ಪುತ್ತೇನೆ. ಯಾರೇ ಆದರೂ ಒಂದೇ ಕಡೆ ಮತ ಹಾಕುವಂತಾಗಬೇಕು. ಆದರೆ ಜಿಬಿಎ ಚುನಾಯಿತ ಸಂಸ್ಥೆಯಲ್ಲ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಸಿಎಂ ಆರ್ಥಿಕ ಸಲಹೆಗಾರರಾದ ಶಾಸಕ ಬಸವರಾಜ ರಾಯರೆಡ್ಡಿ ಅವರು, ಈ ರೀತಿ ಮಾಡಲು ಜನಪ್ರತಿನಿಧಿಗಳ ಕಾಯ್ದೆ ಇದಕ್ಕೆ ಅವಕಾಶ ನೀಡುವುದಿಲ್ಲ. ವಿಳಾಸ ಬದಲಾವಣೆ ಮಾಡಿದರೆ, ನಾನು ಆ ಭಾಗದ ಮತದಾರನಾಗುತ್ತೇನೆ. ಹೀಗಾಗಿ ಜನಪ್ರತಿನಿಧಿಗಳ ಕಾಯ್ದೆಯನ್ನು ಪರಿಶೀಲಿಸಿ ತೀರ್ಮಾನಕ್ಕೆ ಬನ್ನಿ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಹಾಗೆಂದು ಮತದಾನವನ್ನು ಟೂರಿಂಗ್ ಟಾಕೀಸ್ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ಹೊಸ ರೂಲ್ಸ್‌ಗೆ ವಿರೋಧ – ಏರ್ಪೋರ್ಟ್ ಅಥಾರಿಟಿ ವಿರುದ್ಧ ಸಿಡಿದೆದ್ದ ಟ್ಯಾಕ್ಸಿ ಚಾಲಕರು

TAGGED:bengalurucongressDK ShivakumarGBAಕಾಂಗ್ರೆಸ್ಗ್ರೇಟರ್‌ ಬೆಂಗಳೂರು ಪ್ರಾಧಿಕಾರಜಿಬಿಎಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
2 minutes ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
4 minutes ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
38 minutes ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
1 hour ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
2 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?