* 75 ಸದಸ್ಯರನ್ನೊಳಗೊಂಡ ಪ್ರಾಧಿಕಾರ ರಚಿಸಿ ಸರ್ಕಾರ ಆದೇಶ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಧಿಕಾರದ (Greater Bengaluru Aauthority) ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ.
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಪದನಿಮಿತ್ತ ಸದಸ್ಯರಾಗಿ ಪ್ರಧಿಕಾರದಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು, ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿ ಹಲವು ಮಸೂದೆಗಳಿಗೆ ಸಂಪುಟ ಒಪ್ಪಿಗೆ
ಐದು ವಲಯದ ಮಹಾಪೌರರು, ಐದು ವಲಯದ ಆಯುಕ್ತರು, ಬೆಂಗಳೂರು ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರನ್ನು ಪ್ರಾಧಿಕಾರ ಒಳಗೊಂಡಿದೆ.
ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಪಾಲಿಕೆಗಳಾಗಿ ವಿಭಜಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಈಚೆಗೆ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ʻಬಿಬಿಎಂಪಿʼ ಹೆಸರು ಇತಿಹಾಸ ಪುಟಕ್ಕೆ – ಮೇ 15ರಿಂದ ʻಗ್ರೇಟರ್ ಬೆಂಗಳೂರುʼ ಆಡಳಿತ ಜಾರಿ