ಬೆಂಗಳೂರು: 64ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಗ್ರೇಟರ್ ನೆಲಮಂಗಲ ಇಂಡಸ್ಟ್ರೀಸ್ ಅಸೋಸಿಯೇಷನ್ ವತಿಯಿಂದ ಆಚರಿಸಲಾಯಿತು.
ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಖಾಸಗಿ ಹೋಟೆಲಿನಲ್ಲಿ ನೂರಾರು ಉದ್ಯಮಿಗಳು ಸೇರಿದಂತೆ ಕಾರ್ಮಿಕರು ಸೇರಿ ಗ್ರೇಟರ್ ನೆಲಮಂಗಲ ಇಂಡಸ್ಟ್ರೀಸ್ ಅಸೋಸಿಯೇಷನ್ ನಿರ್ಮಿಸಿಕೊಂಡು ನಾನಾ ಯೋಜನೆ, ಹೊಸ ಹೊಸ ತಂತ್ರಜ್ಞಾನ, ಕಾರ್ಮಿಕರ ಕೌಶಲ್ಯದ ಬಗ್ಗೆ ಚಿಂತಿಸಲಾಯಿತು.
Advertisement
ಇದೇ ವೇಳೆ ಗ್ರೇಟರ್ ನೆಲಮಂಗಲ ಇಂಡಸ್ಟ್ರೀಸ್ ಅಸೋಸಿಯೇಷನ್ 8ನೇ ವರ್ಷದ ಸಂಭ್ರಮಾಚರಣೆಗೆ ಸಾಕ್ಷಿಯಾಗಿದ್ದು, ವಿವಿಧ ಗಣ್ಯರು ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗುವ ಮೂಲಕ ಕನ್ನಡ ಹಬ್ಬಕ್ಕೆ ಚಾಲನೆ ನೀಡಲಾಯಿತು.
Advertisement
Advertisement
ಈ ವೇಳೆ ಗ್ರೇಟರ್ ನೆಲಮಂಗಲ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷ ಇ.ಟಿ.ಕೆ ರಾಜು ಮಾತನಾಡಿ, ಜಾಗತಿಕ ಮಟ್ಟದಲ್ಲಿ ನಮ್ಮ ಇಂಡಸ್ಟ್ರೀಸ್ ಗಳು ಪೈಪೋಟಿ ನಡೆಸುತ್ತಿದ್ದು, ಉತ್ತಮವಾದ ರೀತಿಯಲ್ಲಿ ಗ್ರಾಹಕರಿಗೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಅಲ್ಲದೆ ಸದ್ಯದ ಹಣಕಾಸು ವಿಚಾರದಲ್ಲಿ ಸಾಕಷ್ಟು ಕಂಪನಿಗಳು ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಮಾಲೀಕರು ಹಾಗೂ ನೌಕರರು ಸಾಕಷ್ಟು ಪ್ರಮಾಣದಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ.
Advertisement
ಹೀಗಾಗಿ ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಾಲೀಕರು ಹಾಗೂ ನೌಕರರ ಹಿತಾಸಕ್ತಿಗಳನ್ನು ಪರಿಗಣಿಸಿ ಆರ್ಥಿಕವಾಗಿ ಕಂಪನಿಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಇಲ್ಲದಿದ್ದರೆ ಮುಂದಿನ ದಿನನದಲ್ಲಿ ಹೀಗೆ ನಡೆದರೆ ಮಾಲೀಕರು ಹಾಗೂ ಕಾರ್ಮಿಕರು ಬೀದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಲಿದ್ದು ದೇಶದ ಸರ್ವೋತ್ತಮ ಬೆಳವಣಿಗೆಯಲ್ಲಿ ಕುಂಟಿತವಾಗಲಿದ್ದು ಸರ್ಕಾರಗಳು ಗಮನವರಿಸಬೇಕೆಂದು ಇ.ಟಿ.ಕೆ.ರಾಜು ಅಭಿಪ್ರಾಯ ಪಟ್ಟು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.