ಉಡುಪಿ: ಹಿಜಾಬ್ (Hijab) ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು (Hindu Organizations) ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ.
ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್ (Sunil K.R) ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 54 ಮಂದಿ ಸಾವು
ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ನಿರ್ಧಾರದ ಹಿಂದೆ ಬಹಳ ದೊಡ್ಡ ಷಡ್ಯಂತ್ರವಿದೆ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ – ಕೇಸರಿ ಶಾಲಿಗಿಲ್ಲ ಅವಕಾಶ

