Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್: ಡಾ.ಕೆ ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್: ಡಾ.ಕೆ ಸುಧಾಕರ್

Bengaluru City

ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್: ಡಾ.ಕೆ ಸುಧಾಕರ್

Public TV
Last updated: February 17, 2022 6:56 pm
Public TV
Share
3 Min Read
DR K SUDHAKAR
SHARE

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದ ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ 100 ಎಂಬಿಬಿಎಸ್ ಸೀಟುಗಳ ಕಾಲೇಜು ಆರಂಭವಾಗಲಿದ್ದು, ನೂತನ ಕಟ್ಟಡ ನಿರ್ಮಾಣ ಭರದಿಂದ ಸಾಗಿದೆ. ಈ ನಡುವೆಯೇ, ಚಿತ್ರದುರ್ಗದಲ್ಲಿ 150 ಎಂಬಿಬಿಎಸ್ ಸೀಟುಗಳನ್ನು ಹೊಂದಲಿರುವ ‘ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ’ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಿವಿಲ್ ಕಾಮಗಾರಿ ಸೇರಿ ಒಟ್ಟು 500 ಕೋಟಿ ರೂ. ಖರ್ಚಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಿ 500 ಕೋಟಿ ಮಂಜೂರು ಮಾಡಿದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರಿಗೆ ಧನ್ಯವಾದಗಳು. @BSBommai @CMofKarnataka

— Dr Sudhakar K (@mla_sudhakar) February 17, 2022

ಜನಸಂಖ್ಯೆಗೆ ಅನುಗುಣವಾಗಿ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿರುವ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಜೊತೆ ಹೊಸದಾಗಿ 4 ಸಂಸ್ಥೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥಗೆ 100 ಎಂಬಿಬಿಎಸ್ ಸೀಟುಗಳ ಪ್ರವೇಶ ಮಿತಿಯೊಂದಿಗೆ 2022-23 ನೇ ಸಾಲಿಗೆ ಲೆಟರ್ ಆಫ್ ಇಂಟೆಂಟ್ ನೀಡಲಾಗಿದೆ. ಇದರ ಜೊತೆಗೆ ಈಗ ಚಿತ್ರದುರ್ಗದಲ್ಲೂ ಕಾಲೇಜು ಕಟ್ಟಡದ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಈ ಮೂಲಕ ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯರಾಗುವ ಕನಸು ನನಸಾಗಲಿದೆ. ಅಷ್ಟೇ ಅಲ್ಲದೆ ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡ ಆಸ್ಪತ್ರೆಗಳಲ್ಲಿ ಬಡವರಿಗೆ ಉನ್ನತ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲಿದೆ ಎಂದು ತಿಳಿಸಿದ್ದಾರೆ.

DR K SUDHAKAR 1

ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳ ಪ್ರಕಾರ ಪ್ರತಿ 1,000 ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕು. ಆದರೆ ಕರ್ನಾಟಕದಲ್ಲಿ 1,800 ಜನಸಂಖ್ಯೆಗೆ ಒಬ್ಬ ವೈದ್ಯರ ಲಭ್ಯತೆ ಇದೆ. ಈ ಅಸಮತೋಲನ ಸರಿಪಡಿಸಲು ಹಾಗೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಇದೇ ಪ್ರಯತ್ನದ ಭಾಗವಾಗಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಸಲಗದ ನಂತರ ಮತ್ತೆ ನಿರ್ದೇಶನಕ್ಕೆ ದುನಿಯಾ ವಿಜಯ್

150 ಸೀಟುಗಳ ಈ ಕಾಲೇಜನ್ನು 2023-24 ನೆ ಸಾಲಿನಿಂದ ಪ್ರಾರಂಭಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಬಹು ದಿನಗಳ ಬೇಡಿಕೆ ಇಂದು ಈಡೇರಿದಂತಾಗಿದೆ. @bcpatilkourava

— Dr Sudhakar K (@mla_sudhakar) February 17, 2022

2014-15 ಸಾಲಿನ ಆಯವ್ಯಯದಲ್ಲಿನ ಘೋಷಣೆಯಂತೆ ಚಿತ್ರದುರ್ಗದಲ್ಲಿ 150 ಸೀಟುಗಳ ಎಂಬಿಬಿಎಸ್ ಕಾಲೇಜನ್ನು 2015-16ರಲ್ಲೇ ಸ್ಥಾಪಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿತ್ತು. ಆದರೆ 2013-14 ರ ಆರ್ಥಿಕ ವರ್ಷದಲ್ಲಿ ಕಲಬುರ್ಗಿ, ಗದಗ, ಕೊಪ್ಪಳ, ಕಾರಾವಾರ, ಕೊಡಗು ಮತ್ತು ಚಾಮರಾಜನಗರದಲ್ಲಿ ಹೊಸ 6 ಮೆಡಿಕಲ್ ಕಾಲೇಜುಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಹೊಂದಿಸಿಕೊಳ್ಳಬೇಕಾಗಿದ್ದರಿಂದ ತುಮಕೂರು, ಚಿತ್ರದುರ್ಗ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮುಂದೂಡಲಾಗಿತ್ತು. 2021-22ನೇ ಸಾಲಿನ ಬಜೆಟ್ ನಲ್ಲಿ, ಚಿತ್ರದುರ್ಗ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

K Sudhakar 2

ಚಿತ್ರದುರ್ಗದ ಮೆಡಿಕಲ್ ಕಾಲೇಜನ್ನು 2023-24 ನೇ ಸಾಲಿನಿಂದ ಆರಂಭಿಸಲು ಅಗತ್ಯ ಪ್ರಕ್ರಿಯೆಗಳನ್ನು ನಡೆಸಬೇಕೆಂದು ರಾಜ್ಯ ಸರ್ಕಾರ ಸೂಚಿಸಿದೆ. ಇದಕ್ಕೆ ಪೂರಕವಾಗಿ ಸಿದ್ಧತೆ ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆ ತರುತ್ತಿದ್ದು, ಈ ಹೊಸ ಕಾಲೇಜು ನಿರ್ಮಾಣ ಕೂಡ ಸುಧಾರಣೆಯ ಭಾಗವಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಈ ವಾರ 10 ಚಿತ್ರಗಳು ರಿಲೀಸ್ : ಯಾವುದು ನೋಡ್ಬೇಕು, ಯಾವುದು ಬಿಡ್ಬೇಕು?

TAGGED:bengaluruChitradurgadr. k sudhakarmedical collegeಚಿತ್ರದುರ್ಗಡಾ ಕೆ ಸುಧಾಕರ್ಬೆಂಗಳೂರುಮೆಡಿಕಲ್ ಕಾಲೇಜು
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Parappana Agrahara
Bengaluru City

ಅಲೋಕ್‌ ಕುಮಾರ್ ಸ್ಟ್ರಿಕ್ಟ್ ಆಕ್ಷನ್‌ – ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಹಲವು ಕ್ರಮ!

Public TV
By Public TV
19 minutes ago
Explosives
Latest

ಗಣರಾಜ್ಯೋತ್ಸವದ ಹೊತ್ತಿನಲ್ಲೇ ರಾಜಸ್ಥಾನದಲ್ಲಿ 10 ಸಾವಿರ ಕೆಜಿ ಸ್ಫೋಟಕ, ಡಿಟೋನೇಟರ್‌ ಪತ್ತೆ; ಸುಲೇಮಾನ್‌ ಅರೆಸ್ಟ್‌

Public TV
By Public TV
35 minutes ago
Republic Day Narendra Modi
Latest

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

Public TV
By Public TV
45 minutes ago
Google
Latest

77ನೇ ಗಣರಾಜ್ಯೋತ್ಸವ ಸಂಭ್ರಮ – ಗೂಗಲ್ ಡೂಡಲ್‍ನಿಂದ ವಿಶೇಷ ಗೌರವ

Public TV
By Public TV
1 hour ago
gangavali bridge
Latest

ಗಂಗಾವಳಿ ಸೇತುವೆ ಮೇಲಿಲ್ಲ ಸರ್ಕಾರಿ ಬಸ್ ಸಂಚಾರದ ಭಾಗ್ಯ!

Public TV
By Public TV
9 hours ago
udupi accident
Latest

ಉಡುಪಿ| ಟ್ರಕ್ ಟಯರ್ ಅಡಿಗೆ ಸಿಲುಕಿ ಯುವಕ ಸಾವು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?