ಮಲೆ ಮಹದೇಶ್ವರ ಬೆಟ್ಟದಲ್ಲಿ ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಮಾಸ್ಟರ್ ಪ್ಲ್ಯಾನ್‌ – ತ್ರಿಪಕ್ಷೀಯ ಒಡಂಬಡಿಕೆ

Public TV
2 Min Read
Male Mahadeshwara 5

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆ ಉದ್ದೇಶದಿಂದ ‘ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ’ (Green Tomorrow, Male Mahadeshwara Hills) ಎಂಬ ಯೋಜನೆ ಅನುಷ್ಠಾನಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌, ಮೈಸೂರು ಕಾವೇರಿ ಪ್ರದೇಶಿಕ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದನ್ನೂ ಓದಿ: ಬಿಪಿಎಲ್, ಎಪಿಎಲ್‌ ಕಾರ್ಡ್‌ದಾರರಿಗೆ ಬಿಗ್‌ ಶಾಕ್!

green tomorrow mm hills project

ಮೂರು ವರ್ಷಗಳ ಯೋಜನೆ ಇದಾಗಿದ್ದು, ತ್ಯಾಜ್ಯ ನಿರ್ವಹಣೆಯ ಎಲ್ಲಾ ವಿಭಾಗಗಳಲ್ಲಿ ಸಮರ್ಪಕವಾಗಿ ಯೋಜನೆ ಅನುಷ್ಠಾನವಾಗಲಿದೆ. ಎಲ್‌ಐಸಿ ಹೆಚ್‌ಎಫ್‌ಎಲ್‌ ಸಂಸ್ಥೆಯು ಯೋಜನೆಗೆ ಅಗತ್ಯ ಅನುದಾನ ನೆರವು ನೀಡಲಿದೆ. ಮೈಕಾಪ್ಸ್‌ ಸಂಸ್ಥೆ ಯೋಜನೆ ಅನುಷ್ಠಾನದ ಹೊಣೆ ಹೊತ್ತಿದೆ. ಮಲೆ ಮಹದೇಶ್ವರ ಬೆಟ್ಟವನ್ನು ಹಸಿರುಮಯವಾಗಿರುವುದು ಮತ್ತು ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಮಾಡುವ ಉದ್ದೇಶ ಹೊಂದಿದೆ.

ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ವಿಶೇಷ ಜಾತ್ರಾ ಮಹೋತ್ಸವ ಸೇರಿದಂತೆ ಅಮವಾಸ್ಯೆ ದಿನಗಳಂದು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ. ಬರುವಂತಹ ಭಕ್ತರು ಪ್ಲಾಸ್ಟಿಕ್ ವಸ್ತುಗಳು ಸೇರಿದಂತೆ ಅನೇಕ ತ್ಯಾಜ್ಯಗಳನ್ನ ಅಲ್ಲಲ್ಲಿ ಎಸೆಯುತ್ತಾರೆ. ಈ ಕಸವನ್ನ ಸಮರ್ಪಕವಾಗಿ ನಿರ್ವಹಣೆ ಮಾಡಲು ಈಗ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ಮುಂದಾಗಿದ್ದು, ‘ಗ್ರೀನ್ ಟುಮಾರೋ, ಎಂಎಂ ಹಿಲ್ಸ್’ ಎಂಬ ಶೀರ್ಷಿಕೆಯಲ್ಲಿ ಹೊಸ ಪ್ರಾಜೆಕ್ಟ್‌ಗೆ ಮುಂದಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌, ಬಿಜೆಪಿ ಶಾಸಕರಿಗೂ ತಟ್ಟಿದ ವಕ್ಫ್ ಬಿಸಿ – ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು

ತ್ಯಾಜ್ಯ ಮುಕ್ತ ಮಹದೇಶ್ವರ ಬೆಟ್ಟ ಎಂಬ ಶೀರ್ಷಿಕೆಯಡಿ ಮಲೆ ಮಹದೇಶ್ವರ ಬೆಟ್ಟವನ್ನ ಕಸಮುಕ್ತ ಬೆಟ್ಟವನ್ನಾಗಿಸೋದು, ಕಸ ಹಾಗೂ ತ್ಯಾಜ್ಯ ವಿಲೇವಾರಿಯನ್ನ ಸಮರ್ಪಕವಾಗಿ ಮಾಡೋದು, ಮಲೆ ಮಹದೇಶ್ವರ ಬೆಟ್ಟದ ಸುತ್ತಾ ಕಾಡಿದ್ದು ಈ ತ್ಯಾಜ್ಯದಿಂದ ಪ್ರಕೃತಿಯ ಸೌಂದರ್ಯ ಹಾಳು ಮಾಡದೇ ಹಸಿರನ್ನಾಗಿ ಇರಿಸುವುದರ ಜೊತೆಗೆ ಕಾಡು ಪ್ರಾಣಿಗಳಿಗೆ ತ್ಯಾಜ್ಯದಿಂದ ಹಾನಿಯಾಗದಂತೆ ನೋಡಿಕೊಳ್ಳುವುದಾಗಿದು ಮುಖ್ಯ ಉದ್ದೇಶವಾಗಿದೆ. ಶೇಖರಣೆಯಾದ ತ್ಯಾಜ್ಯವನ್ನು ಹೊಸ ತಂತ್ರಜ್ಞಾನದ ಮೂಲಕ ತ್ಯಾಜ್ಯವನ್ನು ಬೇರೆಡೆ ಸಮರ್ಪಕವಾಗಿ ನಿರ್ವಹಣೆ ಮಾಡುವುದರ ಜೊತೆಗೆ ಪ್ಲಾಸ್ಟಿಕ್ ಬಾಟಲ್ ಹಾಗೂ ವೇಸ್ಟ್ ಪೇಪರ್‌ಗಳನ್ನ ಸಂಗ್ರಹಿಸಿ ಮರು ಬಳಕೆ ಮಾಡುವುದು ಸಹ ಯೋಜನೆ ಉದ್ದೇಶ.

Share This Article