ಕನ್ನಡ ರಾಜ್ಯೋತ್ಸವದಂದು ಇಂಗ್ಲಿಷ್ ನಲ್ಲಿ ಶುಭಾಶಯ ಕೋರಿ, ಟ್ವೀಟ್ ಡಿಲೀಟ್ ಮಾಡಿದ್ರು ಶೋಭಾ ಮೇಡಂ

SHOBHA

ಬೆಂಗಳೂರು: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕನ್ನಡ ರಾಜ್ಯೋತ್ಸವ ದಿನದಂದೇ ನಾಡಿನ ಜನತೆಗೆ ಇಂಗ್ಲಿಷ್‍ನಲ್ಲಿ ಶುಭಾಶಯ ಕೋರಿದ್ದರು.

ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕನ್ನಡದಲ್ಲೇ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಅವರು ಮೋದಿ ಅವರ ಟ್ವೀಟನ್ನು ರೀ ಟ್ವೀಟ್ ಮಾಡಿದ್ದಾರೆ. ಆದರೆ ಇದರ ನಡುವೆ ನಾಡಿನ ಜನತೆಗೆ ಶುಭಕೋರುವ ವೇಳೆ ಇಂಗ್ಲಿಷ್‍ನಲ್ಲಿ ಶುಭಕೋರಿದ್ದರು.

SHOBHA tweet copy

ಶೋಭಾ ಕರಂದ್ಲಾಜೆ ಅವರು ಇಲ್ಲಿಯೂ ಇಂಗ್ಲಿಷ್ ಪ್ರೇಮ ತೋರಿದ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶೋಭಾ ಅವರು ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಕನ್ನಡ ಜನತೆಗೆ ಇಂದು ವಿಶೇಷ ದಿನವಾಗಿದ್ದು, ರಾಜ್ಯದ ಸಂಸ್ಕೃತಿ ಹಾಗೂ ಸಂಪ್ರದಾಯಗಳ ಬಗ್ಗೆ ಹೆಮ್ಮೆ ಪಡುವ ಸಮಯವಾಗಿದೆ. ಇಂದು ನಮ್ಮ ಐತಿಹಾಸಿಕ ಪರಂಪರೆಯನ್ನು ನೆನೆಯುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ಮಾಡೋಣ ಎಂದು ಶೋಭಾ ಕರಂದ್ಲಾಜೆ ತಮ್ಮ ಟ್ವೀಟಿನಲ್ಲಿ ಬರೆದುಕೊಂಡಿದ್ದರು.

ಪ್ರಧಾನಿ ಮೋದಿ, ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜ್ಯ, ರಾಷ್ಟ್ರದ ನಾಯಕರು ಕನ್ನಡದಲ್ಲೇ ಶುಭಾಶಯ ತಿಳಿಸಿ ಟ್ವೀಟ್ ಮಾಡಿ ನಾಡಿನ ಜನರು ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ್ದರು. ಇದನ್ನು ಓದಿ: ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ್ರು ಮೋದಿ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *