ಪಾಟ್ನಾ: ಮದುವೆಯ ದಿನದಂದೇ ವರ ನಾಪತ್ತೆಯಾಗಿದ್ದು, ಎಷ್ಟೇ ಕಾದರೂ ವರ ಬಾರದಿದ್ದಕ್ಕೆ ವಧುವಿನ ಕಟುಂಬಸ್ಥರು ಪೊಲೀಸ್ ಠಾಣೆ ಮಟ್ಟಿಲು ಹತ್ತಿದ ಘಟನೆ ಬಿಹಾರದ ಧನ್‍ಬಾದ್ ಪ್ರದೇಶದಲ್ಲಿ ನಡೆದಿದೆ.
ಧನ್ಬಾದ್‍ನ ಭುಲಿ ನಿವಾಸಿ ರತ್ನೇಶ್ ಕುಮಾರ್ ವರ. ಇವರು ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮದುವೆ ಸಮಯದಲ್ಲಿ ರತ್ನೇಶ್ ನಾಪತ್ತೆಯಾಗಿದ್ದು, ಎಷ್ಟು ಕಾದರೂ ಬಾರದೇ ಇದ್ದಾಗ ವಧುವಿನ ಕಡೆಯವರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಈ ಬಗ್ಗೆ ವಧುವಿನ ಸಂಬಂಧಿಕರು, ವರ ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ ನಂತರದಲ್ಲಿ ವರ ವಾಪಸ್ ಬಂದಿದ್ದಾನೆ. ತಡರಾತ್ರಿ ಮದುವೆ ಮಾಡಲಾಯಿತು.
Advertisement
Advertisement
ಕಳೆದ ವರ್ಷವೂ ಇದೇ ರೀತಿ ಆಗಿತ್ತು, ಮದುವೆಯ ದಿನಾಂಕ ನಿಗದಿಯಾಗಿತ್ತು. ಆದರೆ ವರ ರತ್ನೇಶ್ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ವಧುವಿನ ಕಡೆಯವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯವರ ನಡುವೆ ಒಪ್ಪಂದವಾಗಿತ್ತು ಎಂದು ವಧು ಕಡೆಯವರು ತಿಳಿಸಿದ್ದಾರೆ. ಇದನ್ನೂ ಓದಿ: ಮೂರು ವರ್ಷದ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಂದೆ
Advertisement
Advertisement
ಆಗ ರತ್ನೇಶ್ ಕಡೆಯವರು ಪೊಲೀಸ್ ಸಮ್ಮುಖದಲ್ಲಿಯೇ ಮಾರ್ಚ್ 25ರಂದು ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಇದರಿಂದಾಗಿ ವಧು ಕಡೆಯವರು ಮದುವೆಗೆ ಸಂಪೂರ್ಣ ತಯಾರಿ ಮಾಡಿಕೊಂಡಿದ್ದರು. ಆದರೆ ವರ ಬಾರದಿದ್ದಾಗ ವಧುವಿನ ಕುಟುಂಬಸ್ಥರು ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಒಬ್ಬರಿಗೊಬ್ಬರು ಬಡಿದಾಡಿಕೊಂಡ ಶಾಲಾ ಹುಡುಗರು – ವಿದ್ಯಾರ್ಥಿ ಬಲಿ