ವರದಕ್ಷಿಣೆ ಕೇಳಿದ್ದಕ್ಕೆ ವರನನ್ನೇ ಮರಕ್ಕೆ ಕಟ್ಟಿ ಹಾಕಿದ ವಧುವಿನ ಕಡೆಯವ್ರು

Public TV
1 Min Read
uttar pradesh groom

ಲಕ್ನೋ: ಮದುವೆ (Marriage) ಸಮಾರಂಭದಲ್ಲಿ ವರದಕ್ಷಿಣೆ (Dowry) ಕೇಳಿದ್ದಕ್ಕೆ ವಧುವಿನ ಕಡೆಯವರು ವರನನ್ನೇ (Groom) ಕಟ್ಟಿಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ವಧು-ವರ ಹೂ ಮಾಲೆಗಳನ್ನು ಬದಲಿಸಿಕೊಳ್ಳುವುದಕ್ಕೂ ಮೊದಲು ವರ ವಧುವಿನ ಕುಟುಂಬಕ್ಕೆ ವರದಕ್ಷಿಣೆಯ ಬೇಡಿಕೆ ಇಟ್ಟಿದ್ದ. ಇದರಿಂದ ಕೆಂಡಾಮಂಡಲವಾದ ವಧುವಿನ ಕುಟುಂಬದವರು ವರನನ್ನು ಮರಕ್ಕೆ ಕಟ್ಟಿ ಹಾಕಿದ್ದಾಗಿ ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ವೈರಲ್ ಆಗಿರುವ ವೀಡಿಯೋದಲ್ಲಿ ವಧುವಿನ ಕುಟುಂಬದವರು ವರನನ್ನು ಮರಕ್ಕೆ ಕಟ್ಟಿಹಾಕುವುದು ಮಾತ್ರವಲ್ಲದೇ ಅವಾಚ್ಯವಾಗಿ ನಿಂದಿಸುವುದನ್ನು ಕೇಳಬಹುದು. ಆದರೂ ವಧುವಿನಕಡೆಯವರ ವರ್ತನೆಯನ್ನು ವರ ವಿರೋಧಿಸದೇ ಮೌನವಾಗಿ ನಿಂತಿರುವುದು ಕಾಣಿಸಿಕೊಂಡಿದೆ. ಇದನ್ನೂ ಓದಿ: ಮಲಗಿದ್ದ ಪತಿಯ ಗುಪ್ತಾಂಗಕ್ಕೆ ಮಧ್ಯರಾತ್ರಿ ಕಾದ ಎಣ್ಣೆ ಎರಚಿ ಪತ್ನಿ ಎಸ್ಕೇಪ್!

ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ಮಾಂಧಾಟ ಪೊಲೀಸ್ ಠಾಣೆಯ ಪೊಲೀಸರು ವರನನ್ನು ಬಿಡುಗಡೆಗೊಳಿಸಿ ಬಳಿಕ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಧು ಹಾಗೂ ವರನ ಕಡೆಯವರು ಬಳಿಕ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಆದರೆ ಎರಡೂ ಕಡೆಯವರು ರಾಜಿ ಮಾಡಿಕೊಳ್ಳಲು ಮುಂದಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೃಹತ್‌ ಗಾತ್ರದ ಕಡಿದ ಮರ ತಬ್ಬಿಕೊಂಡು ಸೆಕ್ಸ್‌ – ವಿಕೃತ ಕಾಮಿ ಅರೆಸ್ಟ್‌

Share This Article