ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಹಾಡಹಗಲೇ ದರೋಡೆ (Robbery) ನಡೆದಿದೆ. ಇಂಡಿಯಾ ಗೇಟ್‌ನಿಂದ ರಿಂಗ್ ರೋಡ್‌ಗೆ ಸಂಪರ್ಕ ಕಲ್ಪಿಸುವ ಪ್ರಗತಿ ಮೈದಾನದ ಸುರಂಗ ಮಾರ್ಗದಲ್ಲಿ (Pragati Maidan Tunnel) ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗನ್ ತೋರಿಸಿ ಕಾರಿನಲ್ಲಿದ್ದ ಡೆಲಿವರಿ ಏಜೆಂಟ್‌ನ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.
ಪಟೇಲ್ ಸಜನ್ ಕುಮಾರ್ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದು, ಅವರು ಚಾಂದಿನಿ ಚೌಕ್‌ನಲ್ಲಿರುವ ಓಮಿಯಾ ಎಂಟರ್‌ಪ್ರೈಸಸ್‌ನಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ತನ್ನ ಸ್ನೇಹಿತ ಜಿಗರ್ ಪಟೇಲ್ ಜೊತೆ ಸೇರಿ ಶನಿವಾರ ಸಂಜೆ ಗುರುಗ್ರಾಮಕ್ಕೆ 2 ಲಕ್ಷ ರೂ. ನೀಡಲು ಹೋಗುತ್ತಿದ್ದರು.
Advertisement
#WATCH | A delivery agent and his associate were robbed at gunpoint of Rs 1.5 to Rs 2 lakh cash by a group of unknown assailants inside the Pragati Maidan Tunnel on June 24. Police registered a case and efforts are being made to apprehend the criminals: Delhi Police
(CCTV… pic.twitter.com/WchQo2lXSj
— ANI (@ANI) June 26, 2023
Advertisement
ರಿಂಗ್ ರಸ್ತೆಯಿಂದ ಪ್ರಗತಿ ಮೈದಾನದ ಸುರಂಗ ಮಾರ್ಗ ಪ್ರವೇಶಿಸಿ ಸ್ವಲ್ಪ ದೂರ ಸಾಗುತ್ತಿದ್ದಾಗ 2 ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗನ್ ತೋರಿಸಿ ಬಲವಂತವಾಗಿ ಕ್ಯಾಬ್ ತಡೆದಿದ್ದಾರೆ. ಬಳಿಕ ದುಷ್ಕರ್ಮಿಗಳು ನಗದು ತುಂಬಿದ್ದ ಬ್ಯಾಗ್ ಅನ್ನು ದೋಚಿದ್ದಾರೆ. ಇದನ್ನೂ ಓದಿ: ಉಚಿತ ಬಸ್ ಪ್ರಯಾಣ ಎಫೆಕ್ಟ್ – ತಳ್ಳಾಟ, ನೂಕಾಟದಲ್ಲಿ ಅಸ್ವಸ್ಥಳಾದ ವಿದ್ಯಾರ್ಥಿನಿ
Advertisement
Advertisement
ಪಟೇಲ್ ಸಜನ್ ಕುಮಾರ್ ದೂರಿನ ಮೇರೆಗೆ ತಿಲಕ್ ಮಾರ್ಗ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈವರೆಗೂ ಆರೋಪಿಗಳ ಸುಳಿವು ಪತ್ತೆಯಾಗಿಲ್ಲ. ಈ ನಡುವೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಗೋಮಾಂಸ ಕಳ್ಳಸಾಗಣೆ ಮಾಡ್ತಿದ್ದಾನೆಂದು ಶಂಕಿಸಿ ಥಳಿಸಿ ವ್ಯಕ್ತಿಯ ಹತ್ಯೆ