ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (Gruha Jyothi Scheme) ಯೋಜನೆಯ ಫಲಾನುಭವಿಗಳ ಮನೆ-ಮನೆ (House) ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ.
2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್‌ಗಳು(Meter Reader) ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.
ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಆಧಾರ್ ಕಾರ್ಡ್, ಫಲಾನುಭವಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ. ಇದನ್ನೂ ಓದಿ: SIR ಮೊದಲ ದಿನವೇ ಹೈಡ್ರಾಮಾ: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆಗೆ ಕಂದಾಯ ಅಧಿಕಾರಿ ಕಣ್ಣೀರು
ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ.
