– ಬರ ಪರಿಹಾರಕ್ಕೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವುದಾರೆ ನಾನು ಬರಲು ಸಿದ್ಧ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲ ಎಂಬುದು ಮಹಾ ಸುಳ್ಳು. ಗೃಹಲಕ್ಷ್ಮಿ ಯೋಜನೆ ಅರೆಬರೆ ಜಾರಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯದ 1.08 ಕೋಟಿ ಮಹಿಳೆಯರು ಅಕ್ಟೋಬರ್ ತಿಂಗಳಲ್ಲಿ ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಫಲಾನುಭವಿಗಳ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆಯಾಗದಿರುವುದು, ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿನ ವ್ಯತ್ಯಾಸ ಮುಂತಾದ ಕಾರಣಗಳಿಂದಾಗಿ 9.44 ಲಕ್ಷ ಮಹಿಳೆಯರಿಗೆ ಹಣ ಜಮೆಯಾಗಿಲ್ಲ ಎಂದು ತಿಳಿಸಿದ್ದಾರೆ.
Advertisement
Advertisement
ಮೊದಲ ತಿಂಗಳ ಕಂತಿನ ಹಣ 88% ರಷ್ಟು ನೊಂದಣಿಯಾದ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ. ಈಗಾಗಲೇ ಜಮೆ ಆಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ದೋಷ ಸರಿಪಡಿಸುವ ಕಾರ್ಯವನ್ನು ಇಲಾಖೆಯು ಕೈಗೊಂಡಿದೆ. ಬರುವ ತಿಂಗಳು 100% ಅರ್ಜಿದಾರ ಯಜಮಾನಿಯರ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ. ಈ ಯೋಜನೆ ಮೂಲಕ ದೇಶದಲ್ಲೇ ಅತಿ ದೊಡ್ಡ ಮೊತ್ತದ ಮಹಿಳಾ ಸಬಲೀಕರಣ ಯೋಜನೆಯನ್ನು ಯಶಸ್ವಿಯಾಗಿ ಪ್ರತಿ ಮನೆಗೆ ತಲುಪಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 5 ವರ್ಷ ನಾನೇ ಸಿಎಂ: ಎಲ್ಲಾ ವದಂತಿಗೂ ಬ್ರೇಕ್ ಹಾಕಿದ ಸಿದ್ದರಾಮಯ್ಯ
Advertisement
ಬರ ಪರಿಹಾರ ವಿಚಾರದ ಕುರಿತು ಯಡಿಯೂರಪ್ಪ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ, ಬರ ಪರಿಹಾರ ಬಿಡುಗಡೆಗಾಗಿ ಒತ್ತಾಯಿಸಲು ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವುದಾರೆ ನಾನು ನಿಮ್ಮೊಂದಿಗೆ ಬರಲು ಸಿದ್ಧ. 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಬರದಿಂದಾಗಿ ಒಟ್ಟು 33,710 ಕೋಟಿ ರೂ. ಬೆಳೆಹಾನಿಯಾಗಿದೆ. ಕೇಂದ್ರದಿಂದ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ನೀಡಲಾಗಿದೆ ಎಂದು ಹೇಳಿದರು.
Advertisement
ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಬರ ಪರಿಹಾರ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯಾಗಲೀ, ಅನುದಾನವಾಗಲೀ ಯಾವುದು ಬಂದಿಲ್ಲ. ಎನ್‌ಡಿಆರ್‌ಎಫ್ ನಿಯಮಾನುಸಾರ ಬರ ಪರಿಹಾರ ಬಿಡುಗಡೆ ಮಾಡಬೇಕಿದ್ದ ಕೇಂದ್ರ ಸರ್ಕಾರ ಅನಗತ್ಯ ವಿಳಂಬ ಮಾಡುತ್ತಿದೆ. ಈ ಸಂಬಂಧ ತಾವೇ ಸರ್ವಪಕ್ಷ ನಿಯೋಗ ಕೊಂಡೊಯ್ಯುವುದಾದರೆ ನಾನು ನಿಮ್ಮ ಜೊತೆ ಬರುವುದಾಗಿ ಹೇಳಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೂವರೆ ವರ್ಷದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ: ಇಕ್ಬಾಲ್ ಹುಸೇನ್
Web Stories