ಬೆಂಗಳೂರು: ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ (Mysuru) ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಈ ಹಿಂದೆ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈಗ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಾರ್ಥಿ 300 ಅಡಿ ಆಳಕ್ಕೆ ಬಿದ್ದು ಸಾವು
Advertisement
Advertisement
ಈ ತಿಂಗಳ 30 ರಂದು ಮೈಸೂರಿಗೆ ರಾಹುಲ್ ಭೇಟಿ ನೀಡಲಿದ್ದು, ಅದೇ ದಿನ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಐದು ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಈ ಮೂಲಕ ಚಾಲನೆ ದೊರೆಯಲಿದೆ. ಈ ಯೋಜನೆಯ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆಯಾಗಲಿದೆ. ಇದನ್ನೂ ಓದಿ: ಸರ್ಕಾರದ ಎಲ್ಲ ಸಂಸ್ಥೆಗಳಲ್ಲೂ RSS ತನ್ನ ಜನರನ್ನಿರಿಸಿದೆ – ರಾಹುಲ್ ಗಾಂಧಿ ಆರೋಪ
Advertisement
Web Stories