ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್‌

Public TV
2 Min Read
lakshmi hebbalkar 4

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ (Gruhalashmi Scheme) ನಿರೀಕ್ಷೆಯಲ್ಲಿ ಕಾದು ಕುಳಿತಿದ್ದ ಮಹಿಳೆಯರಿಗೆ ಕೊನೆಗೂ ಗುಡ್‌ನ್ಯೂಸ್‌ ಸಿಕ್ಕಿದೆ. ಇದೇ ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಿಸಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಜು.17 ರಂದು (ಸೋಮವಾರ) ಗೃಹಲಕ್ಷ್ಮಿ ಯೋಜನೆ ಆ್ಯಪ್‌ಗೆ ಚಾಲನೆ ನೀಡಲಾಗುವುದು. ಜು.19 ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ 1 ರೂಪಾಯಿ ಖರ್ಚು ಮಾಡೋದು ಬೇಡ: ಲಕ್ಷ್ಮಿ ಹೆಬ್ಬಾಳ್ಕರ್

Gruha Lakshmi

ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಒಂದು ವೇಳೆ ನಿಗದಿತ ದಿನಾಂಕ, ಸಮಯಕ್ಕೆ ನೋಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೆ ಮುಂದೆ ಯಾವುದೇ ದಿನಾಂಕ ಅಥವಾ ಸಮಯದಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.

ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ಪಾವತಿದಾರರಾಗಿರಬಾರದು. ಅಂತಹವರಿಗೆ ಈ ಯೋಜನೆ ಸೌಲಭ್ಯ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿಗೆ ಮುನ್ನವೇ ಸುಲಿಗೆ- ಮನೆ ಮನೆಗೆ ತೆರಳಿ 150 ರೂ. ವಸೂಲಿ

lakshmi hebbalkar1

ಮೊದಲನೆಯದಾಗಿ ಈಗಾಗಲೇ ಪಡಿತರ ಕಾರ್ಡ್‌ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ಅರ್ಜಿ ಸಲ್ಲಿಕೆಯ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಹಾಕಬಹುದು. ಪರ್ಯಾಯವಾಗಿ “ಪ್ರಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ಮಹಿಳೆಯರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಆಗಸ್ಟ್ 18 ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ: ಲಕ್ಷ್ಮಿ ಹೆಬ್ಬಾಳ್ಕರ್

ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ-ಒನ್, ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು.

ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ ಬುಕ್‌ ನಂಬರ್ ಜೋಡಣೆಯಾಗಿರುವ (ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್‌ ಖಾತೆಯ ಪಾಸ್‌ ಬುಕ್) ಮಾಹಿತಿಯನ್ನು ಫಲಾನುಭವಿಗಳು ಕೊಡಬೇಕು. ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು ಎಂದು ಹೇಳಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article