– ಇನ್ಮುಂದೆ ಎಸ್‌ಎಂಎಸ್ ಬಾರದಿದ್ದರೂ ಕೇಂದ್ರಕ್ಕೆ ಹೋಗಿ ಹೆಸರು ನೋಂದಾಯಿಸಲು ಅವಕಾಶ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯೋಜನೆಗೆ ಅಧಿಕೃತ ಚಾಲನೆ ಸಿಕ್ಕ ಬಳಿಕ ಒಂದು ವಾರದಲ್ಲೇ 70 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಹೆಸರು ನೋಂದಾಯಿಸಿದ್ದಾರೆ.
ಆರಂಭದಲ್ಲಿ ಫಲಾನುಭವಿಗಳು ತಮ್ಮ ಮೊಬೈಲ್‌ಗೆ ಸಂದೇಶ ಬಂದ ನಂತರ ನೋಂದಣಿ ಕೇಂದ್ರಗಳಿಗೆ ಹೋಗಿ ನೋಂದಾಯಿಸಿಕೊಳ್ಳಬೇಕಿತ್ತು. ಈಗ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲಾಗಿದೆ. ಮೊಬೈಲ್‌ಗೆ ಮೆಸೇಜ್ ಬರದೇ ಇದ್ದರೂ ಅರ್ಹ ಫಲಾನುಭವಿಗಳು ಇನ್ಮುಂದೆ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ನೋಂದಣಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಉಡುಪಿ ಹೆಸರಿನಲ್ಲಿ ಹರಿದಾಡುತ್ತಿರುವ ಎಲ್ಲಾ ವಿಡಿಯೋಗಳು ಸುಳ್ಳು: ಖುಷ್ಬು ಸುಂದರ್
ಇದುವರೆಗೂ ಮೆಸೇಜ್ ಬಂದರಷ್ಟೇ ಬೆಂಗಳೂರು ಒನ್, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ SMS ಲಭಿಸದೇ ಇದ್ದರೂ ದಾಖಲಾತಿಯೊಂದಿಗೆ ನೇರವಾಗಿ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಸಚಿವಾಲಯ ತಿಳಿಸಿದೆ.
ಈ ನಡುವೆ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಕೆಲವು ಕೇಂದ್ರಗಳಲ್ಲಿ ಹಣ ಪಡೆಯುತ್ತಿದ್ದ ಬಗ್ಗೆ ದೂರು ಬಂದಿತ್ತು. ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆಯನ್ನು ಸರ್ಕಾರ ನೀಡಿದೆ. ಇದನ್ನೂ ಓದಿ: ಶಿಕ್ಷಣ ಸಚಿವರ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ
ನೋಂದಣಿಗೆ ಹಣ ಪಡೆದಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ 112 ಸಂಖ್ಯೆಗೆ ಕರೆ ಮಾಡಿ ದೂರು ನೀಡುವಂತೆ ಇಲಾಖೆಯಿಂದ ಜನರಲ್ಲಿ ಮನವಿ ಮಾಡಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]