ಮೈಸೂರು: ಇದೇ ಆಗಸ್ಟ್ 30ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಅದ್ಧೂರಿ ಚಾಲನೆ ಸಿಗಲಿದೆ.
ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿಂದು ಮೈಸೂರಿಗೆ (Mysuru) ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವ ತಯಾರಿ ಸಭೆ ನಡೆಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹೆಣ್ಮಕ್ಕಳ ರಕ್ಷಣೆಗಾಗಿ ಎನ್‍ಕೌಂಟರ್‌ನ ಅಗತ್ಯವಿದೆ: ಸುವೇಂದು ಅಧಿಕಾರಿ
ಬೆಳಗಾವಿಯಲ್ಲಿ (Belagavi) ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲ್ಯಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮೈಸೂರಿನಲ್ಲಿ ಅನ್ನಭಾಗ್ಯ (Anna Bhagya) ಮಾಡುವ ಪ್ಲ್ಯಾನ್ ಇತ್ತು. ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇದೆ. ಹೀಗಾಗಿ ಗೃಹಲಕ್ಷ್ಮಿಯನ್ನ ಇಲ್ಲಿಂದ ಆರಂಭಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಪತ್ರಿಕೆ, ವೆಬ್‌ಸೈಟ್, ಟಿವಿ ಸ್ಕ್ರೀನ್‌ಗಳಲ್ಲಿ ರಾರಾಜಿಸಿದ ಚಂದ್ರಯಾನ-3 ಸಕ್ಸಸ್ ಸುದ್ದಿ
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ (Bengaluru Teaffic Problem) ಆಗುವ ಕಾರಣದಿಂದಾಗಿ ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ. ಆ.30 ರಂದು ಒಂದು ಬಟನ್ ಒತ್ತಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್‌ಗಳು ಫಲಾನುಭವಿಗಳ ಮೊಬೈಲ್ ನಂಬರ್‌ಗಳಿಗೆ ಬರುತ್ತದೆ. ಎಲ್ಲಾ ಹಣವನ್ನ ಬ್ಯಾಂಕ್‌ಗೆ ಡೆಪಾಸಿಟ್ ಮಾಡಿದ್ದೇವೆ. ಸರ್ವರ್ ಸಮಸ್ಯೆಯಾದ್ರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಅಂತಲೂ ಡಿಕೆಶಿ ಸ್ಪಷ್ಟನೆ ಕೊಟ್ಟಿದ್ದಾರೆ.
ಇದು ಸರ್ಕಾರದ ಕಾರ್ಯಕ್ರಮ. ವಿರೋಧ ಪಕ್ಷದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿ. 2 ಸಾವಿರ ಬಸ್‌ಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ ಭಾಗದಿಂದ ಫಲಾನುಭವಿಗಳನ್ನ ಕರೆಸುತ್ತೇವೆ ಅಂತಾ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]