ನವದೆಹಲಿ: ನವೆಂಬರ್ ತಿಂಗಳಿನಲ್ಲಿ 1,45,867 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್‌ಟಿ ಸಂಗ್ರಹ ಶೇ.11ರಷ್ಟು ಏರಿಕೆಯಾಗಿದೆ. ಕಳೆದ ನವೆಂಬರ್‌ನಲ್ಲಿ 1,31,526 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಸತತ 9ನೇ ಬಾರಿಗೆ ಜಿಎಸ್‌ಟಿ ಸಂಗ್ರಹ 1.40 ಲಕ್ಷ ಕೋಟಿ ರೂ. ಗಡಿ ದಾಟುತ್ತಿದೆ.
Advertisement
Advertisement
ಅಕ್ಟೋಬರ್‌ನಲ್ಲಿ ಸಂಗ್ರಹವಾದ ಜಿಎಸ್‌ಟಿಗೆ ಹೋಲಿಸಿದರೆ ನವೆಂಬರ್ ಜಿಎಸ್‌ಟಿ ಸಂಗ್ರಹ ಕಡಿಮೆಯಾಗಿದೆ. ಅಕ್ಟೋಬರ್‌ನಲ್ಲಿ 1,51,718 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಇದನ್ನೂ ಓದಿ: iPhone ತಯಾರಿಸುವ ಕೋಲಾರದ ವಿಸ್ಟ್ರಾನ್ ಖರೀದಿಗೆ ಮುಂದಾದ ಟಾಟಾ
Advertisement
ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕೇಂದ್ರ ಜಿಎಸ್‌ಟಿ(CGST) ಪಾಲು 25,681 ಕೋಟಿ ರೂ ಆಗಿದ್ದರೆ ರಾಜ್ಯ ಜಿಎಸ್‌ಟಿ(SGST) 32,651 ಕೋಟಿ ರೂ. ಆಗಿದೆ. ಇಂಟಿಗ್ರೇಟೆಡ್ ಜಿಎಸ್‌ಟಿ(ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 77,103 ಕೋಟಿ ರೂ.ಗಳಾಗಿವೆ. ಇದರಲ್ಲಿ 10,433 ಕೋಟಿ ರೂ.(ವಸ್ತುಗಳನ್ನು ಆಮದು ಮಾಡಿಕೊಂಡಿದ್ದಕ್ಕೆ 817 ಕೋಟಿ ರೂ. ಸಂಗ್ರಹ ಸೇರಿ) ಸೆಸ್ ಕೂಡ ಸೇರಿದೆ.
Advertisement
ಇಂಟಿಗ್ರೇಟೆಡ್ ಜಿಎಸ್‌ಟಿಯಿಂದ ಕೇಂದ್ರ ಜಿಎಸ್‌ಟಿಗೆ 33,997 ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 28,538 ಕೋಟಿ ರೂ. ವರ್ಗಾಯಿಸಲಾಗಿದೆ. ಈ ಹಂಚಿಕೆಯ ಬಳಿಕ ನವೆಂಬರ್‌ನಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯ ಕ್ರಮವಾಗಿ 59,678 ಕೋಟಿ ರೂ. ಮತ್ತು 61,189 ಕೋಟಿ ರೂ.ಗಳಾಗಿವೆ. ಕೇಂದ್ರ ಸರ್ಕಾರ ಜಿಎಸ್‌ಟಿ ಪರಿಹಾರವಾಗಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 17 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.
ಕರ್ನಾಟಕದಲ್ಲಿ(Karnataka) ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.13 ರಷ್ಟು ಏರಿಕೆಯಾಗಿದ್ದು, 10,238 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ನವೆಂಬರ್‌ನಲ್ಲಿ 9,048 ಕೋಟಿ ರೂ. ಸಂಗ್ರಹವಾಗಿತ್ತು.
ಮುಂದಿನ ಜಿಎಸ್‌ಟಿ ಕೌನ್ಸಿಲ್(GST Council) ಸಭೆ ಡಿ.17 ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಈ ವೇಳೆ ಕ್ಯಾಸಿನೋಗಳು, ಆನ್‌ಲೈನ್ ಗೇಮಿಂಗ್ ಮತ್ತು ಕುದುರೆ ರೇಸಿಂಗ್‌ಗಳ ಮೇಲೆ ಜಿಎಸ್‌ಟಿ ವಿಧಿಸುವ ಕುರಿತು ರಾಜ್ಯ ಹಣಕಾಸು ಸಚಿವರ ಸಮಿತಿಯ ಎರಡು ವರದಿಗಳು ಮತ್ತು ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವ ಕುರಿತು ಸಭೆ ಚರ್ಚೆ ನಡೆಸಲಿದೆ.