ಬೀದರ್: ಬಸವಕಲ್ಯಾಣದಲ್ಲಿ ನಡೆದಿದ್ದ ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಜಿಎಸ್‌ಟಿ ಆಫೀಸರ್ (GST Officer) ಭಾಗಿಯಾಗಿರುವ ವಿಡಿಯೋ ಭಾರೀ ವೈರಲ್ ಆಗಿದೆ.
ಕಲಬುರಗಿ (Kalaburagi) ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ಅ.14ರಂದು ಬಸವಕಲ್ಯಾಣದಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಗಣವೇಶ ಧರಿಸಿ ಜಿಎಸ್‌ಟಿ ಆಫೀಸರ್ ಭಾಗವಹಿಸಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಇದನ್ನೂ ಓದಿ: ಮೊದಲ ದಿನ ಸಾಧ್ಯವಾಗದ ಹಾಸನಾಂಬೆ ದರ್ಶನ – ಇಂದು ಮತ್ತೆ ದೇವಾಲಯಕ್ಕೆ ಬಂದ ಸುಳ್ಯ ಶಾಸಕಿ
ಆರ್‌ಎಸ್‌ಎಸ್‌ನ 100ನೇ ವರ್ಷದ ಸಂಭ್ರಮಾಚರಣೆ ಹಿನ್ನಲೆ ಪಥಸಂಚಲನ ನಡೆದಿದ್ದು, ಈ ಪಥಸಂಚಲನದಲ್ಲಿ ನೂರಾರು ಆರ್‌ಎಸ್‌ಎಸ್ ಕಾರ್ಯಕರ್ತರು ಭಾಗವಹಿಸಿದ್ದರು. ಪಥಸಂಚಲನವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ್ದು, ಇದೇ ಪಥಸಂಚಲನದಲ್ಲಿ ಸರ್ಕಾರಿ ಶಾಲೆ ಶಿಕ್ಷಕರು ಹಾಗು ಪಿಡಿಓಗಳು ಕೂಡಾ ಭಾಗಿಯಾಗಿದ್ದರು ಎನ್ನಲಾಗುತ್ತಿದೆ.