ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಪರ ಮಾತನಾಡಿರುವ ಶಾಸಕ ಜಿ.ಟಿ ದೇವೇಗೌಡರ (G.T Devegowda) ವಿಚಾರವಾಗಿ, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಮುಡಾ ಹಗರಣ (MUDA scam) ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ವ್ಯಂಗ್ಯವಾಡಿದ್ದಾರೆ.
ಲೋಕಾಯುಕ್ತ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಟಿಡಿ ಸಹ 50:50 ಅನುಪಾತದ ಫಲಾನುಭವಿಯಾಗಿದ್ದಾರೆ. ಅವರಿಗೂ ತನಿಖೆಯ ಭಯ ಶುರುವಾಗಿದೆ. ಅದೇ ಕಾರಣಕ್ಕೆ ಭಯದಿಂದ ಹೀಗೆ ಮಾತಾಡ್ತಿದ್ದಾರೆ. ಮತ್ತೊಂದಿಷ್ಟು ಕಳ್ಳರು ಮುಂದಿನ ದಿನಗಳಲ್ಲಿ ಇದೇ ರೀತಿ ಮಾತಾಡುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: 5 ವರ್ಷ ಸಿದ್ದರಾಮಯ್ಯ ಅಧಿಕಾರ ಪೂರೈಸಲಿದ್ದಾರೆ: ಡಿ.ಕೆ.ಸುರೇಶ್
ಕಳ್ಳರು ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚನೆ ಮಾಡಿಕೊಂಡಿದ್ದಾರೆ. ಜಿಟಿಡಿ 3 ತಿಂಗಳಿನಿಂದ ಏನು ಮಾಡುತ್ತಿದ್ದರು? ದಸರಾದಂತ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು. ಮುಡಾದಲ್ಲಿ ಜಿ.ಟಿ ದೇವೇಗೌಡರ ಅಕ್ರಮ ಇರಬಹುದು. ಆ ಕಾರಣಕ್ಕೆ ಎಲ್ಲರೂ ಒಂದಾಗಿದ್ದಾರೆ. ಆ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.
ಹೆಚ್.ಸಿ ಮಹದೇವಪ್ಪ ಅವರ ಸಹೋದರನ ಮಗನಿಗೆ ಸೈಟ್ ಕೊಡಲಾಗಿದೆ ಎಂಬ ಮಾಹಿತಿ ಇದೆ. ಮರಿಗೌಡ ಸಹೋದರ ಶಿವಣ್ಣ ಅವರಿಗೆ ಸೇಲ್ ಡೀಡ್ ಮೂಲಕ ಸೈಟ್ ಕೊಡಲಾಗಿದೆ. ಎಲ್ಲದರ ಬಗ್ಗೆಯೂ ಮಾಹಿತಿ ಕೊಟ್ಟಿದ್ದೇನೆ ಎಂದಿದ್ದಾರೆ.
ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಜಿ.ಟಿ. ದೇವೇಗೌಡರು ಹೇಳಿದ್ದರು. ಇಷ್ಟೇ ಅಲ್ಲದೇ ಕೇಂದ್ರ ಸಚಿವ ಹೆಚ್‍ಡಿಕೆ ವಿರುದ್ಧ ಸಹ ಕಿಡಿಕಾರಿದ್ದರು. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆ ಶಾಕ್!