ಮೈಸೂರು: ಕುಟುಂಬ ರಾಜಕಾರಣ ಈಗ ವಿಷಯವಲ್ಲ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕುಟುಂಬ ಈಗ ಒಂದಲ್ಲ. ಅವರು ಬೇರೆ ಬೇರೆಯಾಗಿ ಸಾಕಷ್ಟು ವರ್ಷವಾಗಿದೆ ಎಂದು ಸಚಿವ ಜಿ.ಟಿ ದೇವೇಗೌಡ ಕುಟುಂಬ ರಾಜಕಾರಣಕ್ಕೆ ಹೊಸ ವ್ಯಾಖ್ಯಾನ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಮಕ್ಕಳಾದ ಬಾಲಕೃಷ್ಣ ಅವರ ಕುಟುಂಬವೇ ಬೇರೆ. ರೇವಣ್ಣ ಅವರ ಕುಟುಂಬವೆ ಬೇರೆ. ಕುಮಾರಸ್ವಾಮಿ ಅವರ ಕುಟುಂಬವೇ ಬೇರೆ. ಇಲ್ಲಿ ನಾಮ ನಿರ್ದೇಶನ ಮಾಡುತ್ತಿಲ್ಲ ಅಂದ್ರು.
ಕುಟುಂಬಕ್ಕೂ ಮಿಗಿಲಾಗಿ ಜನರ ಮುಂದೆ ಹೋಗಿ ಅವರು ಆಯ್ಕೆಯಾಗುತ್ತಿದ್ದಾರೆ. ದೇವೇಗೌಡರ ಕುಟುಂಬದಲ್ಲಿ ಮಾತ್ರ ಕುಟುಂಬ ರಾಜಕಾರಣ ಇಲ್ಲ. ದೇಶದ ಸಾಕಷ್ಟು ರಾಜ್ಯಗಳಲ್ಲಿ ಕುಟುಂಬ ರಾಜಕಾರಣ ಇದೆ ಎಂದು ಅವರು ಹೇಳಿದ್ರು.
ಸುಮಲತಾ ಬಗ್ಗೆ ಸಚಿವ ರೇವಣ್ಣ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಬಾಯಿಗೆ ಬಂದಂತೆ ಮಾತನಾಡುವವರಿಗೆಲ್ಲ ಈಗ ಉತ್ತರ ಕೊಡಲು ಸಾಧ್ಯವಿಲ್ಲ. ಯಾರು ಕೂಡ ಇನ್ನೊಬ್ಬರನ್ನು ನೋವಾಗುವ ರೀತಿ ಮಾತನಾಡಬಾರದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಈ ವಿಚಾರದಲ್ಲಿ ಯಾರು ತುಟಿ ಬಿಚ್ಚಬಾರದು ಎಂದು ಹೇಳಿದ್ದಾರೆ. ಇದರಿಂದ ನನ್ನನ್ನು ಕಟ್ಟಿ ಹಾಕಿದಾಗೆ ಆಗಿದೆ. ಈ ಹಿನ್ನೆಲೆಯಲ್ಲಿ ಈ ವಿಚಾರವಾಗಿ ನಾನು ಯಾವ ಪ್ರತಿಕ್ರಿಯೆ ನೀಡಲ್ಲ ಎಂದು ಜಿಟಿಡಿ ತಿಳಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv